ವಿಧಾನಸೌಧದಲ್ಲಿ ರಾಜಕೀಯ ಚಟುವಟಿಕೆ: ಆಯೋಗಕ್ಕೆ ಬಿಜೆಪಿ ದೂರು
x
ಬಿಜೆಪಿ ನಿಯೋಗ

ವಿಧಾನಸೌಧದಲ್ಲಿ ರಾಜಕೀಯ ಚಟುವಟಿಕೆ: ಆಯೋಗಕ್ಕೆ ಬಿಜೆಪಿ ದೂರು

ಡಿ.ಕೆ. ಶಿವಕುಮಾರ್ ರಾಜ್ಯದ ಜವಾಬ್ದಾರಿಯುತ ಸಚಿವರು ಅವರಿಗೆ ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಬಾರದು ಎನ್ನುವ ವಿಷಯ ತಿಳಿದಿದ್ದರೂ, ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ


ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದರೂ, ಕರ್ನಾಟಕ ಸರ್ಕಾರದ ಸಚಿವರು ಹಾಗೂ ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಮುಂದುವರಿದಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ.

ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ "ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಹಾಗೂ ಕಾಂಗ್ರೆಸ್ ಕಚೇರಿ ಎರಡೂ ಒಂದೇ ಎಂದು ಭಾವಿಸಿದಂತಿದೆ. ಮಾ.30ರಂದು ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ" ಎಂದು ಉಲ್ಲೇಖಿಸಿದೆ.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜವಾಬ್ದಾರಿಯುತ ಸಚಿವರು ಅವರಿಗೆ ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಬಾರದು ಎನ್ನುವ ವಿಷಯ ತಿಳಿದಿದ್ದರೂ, ನೀತಿ ಸಂಹಿತೆಯನ್ನು ಧಿಕ್ಕರಿಸಿ ರಾಜಕೀಯ ಕಾರ್ಯಕ್ರಮ ನಡೆಸಿದ್ದಾರೆ. ಈ ವಿಷಯ ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಗಮನಕ್ಕೆ ಬಂದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಆತಂಕಕಾರಿ ಬೆಳವಣಿಗೆ ಎಂದು ಹೇಳಲಾಗಿದೆ.


ಅಲ್ಲದೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಜಾರಿ ಮಾಡುತ್ತಿಲ್ಲ. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆ ಇನ್ನೂ ಮುಂದುವರಿದಿದೆ ಎಂದು ಬಿಜೆಪಿ ದೂರಿದೆ.

ಬಿಜೆಪಿ ನಿಯೋಗದಲ್ಲಿ ಶಾಸಕ ಸುರೇಶ್ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ. ರಾಮಮೂರ್ತಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ರಾಜ್ಯ ವಕ್ತಾರ ಪ್ರಕಾಶ್ ಎಸ್, ಎಚ್.ಎನ್. ಚಂದ್ರಶೇಖರ್, ಬೆಂಗಳೂರು ದಕ್ಷಿಣ ಜಿಲ್ಲಾ ವಕ್ತಾರ ಟಿ.ಎಸ್. ಸಂಕೀರ್ತ್ ಸೇರಿದಂತೆ ಹಲವರು ಇದ್ದರು.

Read More
Next Story