ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ಪೊಲೀಸ್‌ ಕಸ್ಟಡಿ ಜೂನ್ 10ರ ವರೆಗೆ ವಿಸ್ತರಣೆ
x
ಎಸ್‌ ಐ ಟಿ ವಶದಲ್ಲಿರುವ ಪ್ರಜ್ವಲ್‌ ರೇವಣ್ಣ

ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ಪೊಲೀಸ್‌ ಕಸ್ಟಡಿ ಜೂನ್ 10ರ ವರೆಗೆ ವಿಸ್ತರಣೆ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಕೋರ್ಟ್ ಜೂ.10ರ ವರೆಗೆ ವಿಸ್ತರಿಸಿ ಆದೇಶಿಸಿದೆ.


ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಗುರುವಾರ(ಜೂ.6) ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಯನ್ನು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಎಸ್ಐಟಿ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನಾಯಾಧೀಶ ಕೆ.ಎಂ. ಶಿವಕುಮಾರ್ ಅವರು ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿಯನ್ನು ಜೂನ್ 10 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗಿದ್ದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ ಐ ಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ರೇವಣ್ಣ ಏ.26ರಂದು ಲೋಕಸಭೆ ಚುನಾವಣೆ ಮತದಾನ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದರು. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅವರು ಮೇ 31ರಂದು ರಾಜ್ಯಕ್ಕೆ ವಾಪಸ್‌ ಆಗಿದ್ದರು. ಆಗ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು.

Read More
Next Story