ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧೆ: ಯುಪಿ ಕಾಂಗ್ರೆಸ್ ನಾಯಕ
ಅಮೇಥಿ, ಮಾ. 6- ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ ರೊಬ್ಬರು ಬುಧವಾರ ಹೇಳಿದ್ದಾರೆ.
ಅಮೇಥಿಯಿಂದ ರಾಹುಲ್ ಗಾಂಧಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಮತ್ತು ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ದೆಹಲಿಯಲ್ಲಿ ನಡೆದ ಸಭೆಯ ನಂತರ ಹಿಂತಿರುಗಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಘಾಲ್ ಹೇಳಿದರು.
ರಾಹುಲ್ ಗಾಂಧಿ 2002ರಿಂದ 2019ರವರೆಗೆ ಅಮೇಥಿಯನ್ನು ಸಂಸತ್ತಿನಲ್ಲಿ ಪ್ರತಿನಿಧಿಸಿದ್ದರು. 2019 ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತರು. ಅವರು ಈಗ ಕೇರಳದ ವಯನಾಡಿನ ಸಂಸದರಾಗಿದ್ದಾರೆ.
Next Story