Rain Forecast | 22 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
x
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ

Rain Forecast | 22 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ವರುಣ (Rain) ಕೃಪೆ ತೋರಿದ್ದಾನೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಹಾಗೂ ಬೀದರ್‌ನಲ್ಲಿ ಮಳೆಯಾಗಿದೆ. ಇನ್ನು ಮಾ. 22ರಿಂದ ಮೂರು ದಿನಗಳ ಕಾಲ ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.


ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ವರುಣ (Rain) ಕೃಪೆ ತೋರಿದ್ದಾನೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಹಾಗೂ ಬೀದರ್‌ನಲ್ಲಿ ಮಳೆಯಾಗಿದೆ. ಇನ್ನು ಮಾ. 22ರಿಂದ ಮೂರು ದಿನಗಳ ಕಾಲ ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಖ್ಯವಾಗಿ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಹಾಗೂ ಕೊಡಗಿನಲ್ಲಿ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ , ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಿಂದ ಎರಡು ದಿನ ಮಳೆಯಾಗಲಿದೆ. ಮಂಗಳವಾರದಿಂದ ಮೂರು ದಿನ ಬೀದರ್‌ನಲ್ಲಿ ಮಳೆಯಾಗಲಿದೆ. ಮಾರ್ಚ್ 21ರಿಂದ 2 ದಿನಗಳ ಕಾಲ ಕೊಪ್ಪಳದಲ್ಲಿ ಹಾಗೂ ಮಾರ್ಚ್ 22ರಿಂದ 4 ದಿನಗಳ ಕಾಲ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 38.9 ಡಿಗ್ರಿ ಸೆಲ್ಸಿಯಸ್ ಕೊಪ್ಪಳದಲ್ಲಿ ದಾಖಲಾಗಿದೆ. ಅತಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.

ಮುಂದಿನ 48 ಗಂಟೆ ಅಲ್ಲಲ್ಲಿ ಮಳೆ

ಗುರುವಾರ ಹಾಗೂ ಶುಕ್ರವಾರ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಒಣಹವೆ ಇರಲಿದೆ.

ತಾಪಮಾನದ ಮುನ್ಸೂಚನೆ

ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಇನ್ನು ಗರಿಷ್ಠ ಉಷ್ಣಾಂಶವು 34 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Read More
Next Story