ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿ. ರೇಣುಕಸ್ವಾಮಿ ಕೊಲೆಯಾದ ಬಳಿಕ ರಾಜು ತಲೆಮರೆಸಿಕೊಂಡಿದ್ದ. ಪ್ರಕರಣದಲ್ಲಿ ಈತ 9ನೇ ಆರೋಪಿ ಆಗಿದ್ದ. ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರೇಣುಕಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಾಗ ಆರೋಪಿ ನಂದೀಶ್ ಜೊತೆಗೆ ಸೇರಿ ರಾಜು ಎಲೆಕ್ನಿಕ್ ಶಾಕ್ ನೀಡಿದ್ದ. ಮೆಗ್ಗರ್ ಸಾಧನ ಬಳಸಿ ರೇಣುಕಸ್ವಾಮಿಗೆ ಎಲೆಕ್ನಿಕ್ ಶಾಕ್ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಜೂನ್ 15 ರಂದು ದರ್ಶನ್ ಮತ್ತು ಗ್ಯಾಂಗ್ ಅವರನ್ನು ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜಾರು ಪಡಿಸಲಾಗಿತ್ತು. ಈ ವೇಳೆ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿ, ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂಬ ವಿಷಯವನ್ನು ಬಹಿರಂಗಪಡಿಸಿದ್ದರು. ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ್ದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು.