ಪೆನ್‌ಡ್ರೈವ್‌ ಪ್ರಕರಣ | ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ
x
ಹೆಚ್‌.ಡಿ ರೇವಣ್ಣ

ಪೆನ್‌ಡ್ರೈವ್‌ ಪ್ರಕರಣ | ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿರುವ 2 ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂ.14ಕ್ಕೆ ಹೈಕೋರ್ಟ್ ಮೂಂದೂಡಿದೆ.


ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ ರೇವಣ್ಣ ವಿರುದ್ಧ ದಾಖಲಿಸಿರುವ 2 ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜೂ.14ಕ್ಕೆ ಮೂಂದೂಡಿದೆ.

ಇದೇ ವೇಳೆ ಹೈಕೋರ್ಟ್‌ನ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಪೀಠ, ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನೂ ಮುಂದೂಡಿದೆ.

ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇತ್ತೀಚೆಗೆ ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಇದೀಗ ಎರಡೂ ಎಫ್‌ಐಆರ್‌ ರದ್ದು ಮಾಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Read More
Next Story