ಯುವ ರಾಜ್​ಕುಮಾರ್ ಪತ್ನಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಸಪ್ತಮಿ ಗೌಡ
x
ನಟಿ ಯುವ ಮತ್ತು ಸಪ್ತಮಿಗೌಡ

ಯುವ ರಾಜ್​ಕುಮಾರ್ ಪತ್ನಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಸಪ್ತಮಿ ಗೌಡ

ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಸಪ್ತಮಿಗೌಡ ಕೋರ್ಟ್‌ಗೆ ಮನವಿ ಮಾಡಿದ್ದಾರೆ.


Click the Play button to hear this message in audio format

ನಟ ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಚೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣದಲ್ಲಿ ನಟಿ ಸಪ್ತಮಿ ಗೌಡ ಅವರ ಹೆಸರು ಕೂಡ ಕೇಳಿಬಂದಿತ್ತು. ಈ ಹಿನ್ನಲೆ ನಟಿ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು, ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.

ನಟ ಯುವರಾಜ್ ಕುಮಾರ್, ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ತಮ್ಮ ಪತ್ನಿ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಯುವರಾಜ್ ಕುಮಾರ್ ಪರ ವಕೀಲ ಮಾಧ್ಯಮಗಳೊಟ್ಟಿಗೆ ಮಾತನಾಡಿ, ಶ್ರೀದೇವಿ ಅವರ ಚಾರಿತ್ಯ್ರದ ಬಗ್ಗೆ ಅನುಮಾನ ಬರುವಂಥಹಾ ಆರೋಪಗಳನ್ನು ಮಾಡಿದ್ದರು.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಯುವ ಪತ್ನಿ ಶ್ರೀದೇವಿ, ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಹಜೀವನ ನಡೆಸಿದ್ದಾರೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು.

ಇದೀಗ ಈ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ, ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸಪ್ತಮಿ ಆರೋಪ ಮಾಡಿದ್ದು, ಶ್ರೀದೇವಿ ಭೈರಪ್ಪ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುವಂತೆ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಸಲ್ಲಿಸಿದ್ದರು.

ಅಂತೆಯೇ ನಿರ್ಭಂದಕಾಜ್ಞೆ ಆದೇಶಿಸಿರುವ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ, ಶ್ರೀದೇವಿ ಭೈರಪ್ಪ ಅವರಿಗೆ ನೊಟೀಸ್ ಜಾರಿ ಮಾಡುವಂತೆ ಆದೇಶ ಮಾಡಿದೆ.

Read More
Next Story