​ಎಸ್​ಎಸ್‌ಎಲ್‌ಸಿ ಫಲಿತಾಂಶk
x
ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಹೊರಬೀಳಲಿದೆ.

​ಎಸ್​ಎಸ್‌ಎಲ್‌ಸಿ ಫಲಿತಾಂಶk

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 09) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.


Click the Play button to hear this message in audio format

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 09) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 09ರಂದು ಬೆಳಗ್ಗೆ 10:30ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

  • ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟವು ತೆರೆಯುತ್ತದೆ
  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Read More
Next Story