
ತಮಿಳುನಾಡಿನಲ್ಲಿ ಸಿಎಎ ಜಾರಿ ಇಲ್ಲ: ಸ್ಟಾಲಿನ್
ಚೆನ್ನೈ, ಮಾರ್ಚ್ 12 -ಸಿಎಎ ʻವಿಭಜಕ ಮತ್ತು ಯಾವುದೇ ಪ್ರಯೋಜನವಿಲ್ಲದ' ಕಾನೂನು. ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ 'ತರಾತುರಿಯಲ್ಲಿ' ಸಿಎಎ ಕಾಯಿದೆಯ ನಿಯಮಗಳನ್ನು ಜಾರಿಗೊಳಿಸಿದ್ದಕ್ಕೆ ಕೇಂದ್ರದ ಬಿಜೆಪಿ ಆಡಳಿತವನ್ನುತರಾಟೆಗೆ ತೆಗೆದು ಕೊಂಡ ಅವರು, ಸಿಎಎ ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ಹೇಳಿದರು. ʻಸಿಎಎಯಿಂದ ಯಾವುದೇ ಪ್ರಯೋಜನ ಇಲ್ಲ. ಭಾರತೀಯರಲ್ಲಿ ಒಡಕು ಸೃಷ್ಟಿಸಲು ದಾರಿ ಮಾಡಿಕೊಡುತ್ತದೆ. ಈ ಕಾನೂನು ಸಂಪೂರ್ಣವಾಗಿ ಅನಪೇಕ್ಷಿತವಾಗಿದ್ದು, ರದ್ದುಗೊಳಿಸ ಬೇಕಿದೆ. ಆದ್ದರಿಂದ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʻಸಿಎಎ ಬಹುತ್ವ, ಜಾತ್ಯತೀತತೆ, ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ವಿರುದ್ಧವಾಗಿದೆʼ ಎಂದು ಪುನರುಚ್ಚರಿಸಿದರು.
Next Story