
ಕೋಟಿ ಕೋಟಿ ನಗದು ಪತ್ತೆಯಾಗಿದೆ.
ಐಷಾರಾಮಿ ಕಾರಿನಲ್ಲಿ ಕೋಟಿ ನಗದು ಪತ್ತೆ!
ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರ್‌ನಲ್ಲಿ ದಾಖಲೆಯಿಲ್ಲದ ಕೋಟಿ ಕೋಟಿ ಹಣ ಪತ್ತೆಯಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆ, ಪೊಲೀಸರು ಚುನಾವಣಾ ಅಕ್ರಮಗಳನ್ನು ತಡೆಯಲು ಎಲ್ಲೆಡೆ ತಪಾಸಣೆ ನಡೆಸುತ್ತಿದ್ದು, ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರ್‌ಗಳಲ್ಲಿ ದಾಖಲೆಯಿಲ್ಲದ ಕೋಟಿ ಕೋಟಿ ಹಣ ಪತ್ತೆಯಾಗಿದೆ.
ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ ಐಷಾರಾಮಿ ಕಾರಿನಲ್ಲಿರುವ ಚೀಲವೊಂದರಲ್ಲಿ ಒಂದು ಕೋಟಿಗಿಂತಲೂ ಅಧಿಕ ಹಣ ಪತ್ತೆಯಾಗಿದೆ. ಸದ್ಯ ಹಣ ಮತ್ತು ಕಾರ್ ಅನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಹಣದ ಚೀಲ ಇರುವ ಕಾರನ್ನು ಪರೀಶೀಲನೆ ನಡೆಸುತ್ತಿದ್ದಾರೆ. ಕಾರು ಹಾಗೂ ಹಣ ಯಾರದ್ದು? ಹಣದ ಬಗ್ಗೆ ಸೂಕ್ತ ದಾಖಲೆಗಳು ಇವೆಯೇ ಎಂಬ ಬಗ್ಗೆ ಪರುಶೀಲನೆ ನಡೆಸಿದ್ದಾರೆ.
Next Story