
ನಾರಾಯಣ ಗುರುಗಳಿಗೆ ಹಿಂದೂ ಧರ್ಮಗುರುಗಳ ಸಾಲಿನಲ್ಲಿ ಸ್ಥಾನ ಇಲ್ಲವೇ? ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಸಂಖ್ಯಾತ ಸಮುದಾಯ ಬಿಲ್ಲವರ ಆರಾಧ್ಯಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಅವಕಾಶ ನೀಡಲಿಲ್ಲ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಶಾಲಾ ಪಠ್ಯದಲ್ಲಿದ್ದ ನಾರಾಯಣ ಗುರುಗಳ ಪಾಠವನ್ನೂ ಕಿತ್ತು ಹಾಕಿತು. ಜನ ಸಿಡಿದೆದ್ದು ಪ್ರತಿಭಟನೆ ನಡೆಸಿದರೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ಸಿದ್ದರಾಮಯ್ಯ ಅರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಸಂಖ್ಯಾತ ಸಮುದಾಯ ಬಿಲ್ಲವರ ಆರಾಧ್ಯಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಅವಕಾಶ ನೀಡಲಿಲ್ಲ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಶಾಲಾ ಪಠ್ಯದಲ್ಲಿದ್ದ ನಾರಾಯಣ ಗುರುಗಳ ಪಾಠವನ್ನೂ ಕಿತ್ತು ಹಾಕಿತು. ಜನ ಸಿಡಿದೆದ್ದು ಪ್ರತಿಭಟನೆ ನಡೆಸಿದರೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ʻದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೀಡಿದ ಕೊಡುಗೆಗಳೇನುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ 33 ವರ್ಷಗಳಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಭಾರತೀಯ ಜನತಾ ಪಕ್ಷವನ್ನು (BJP) ಗೆಲ್ಲಿಸಿದ್ದಾರೆ. ಆದರೆ, ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಈ ಕ್ಷೇತ್ರಕ್ಕೆ ನೀವು ಕೊಟ್ಟದ್ದೆಷ್ಟು, ಎನ್ನುವ ಲೆಕ್ಕ ಕೊಡಿ, ಈ ಜಿಲ್ಲೆಯಿಂದ ಏನು ಕಿತ್ತುಕೊಂಡಿದ್ದೀರಿ ಎನ್ನುವ ಲೆಕ್ಕವನ್ನು ನಾನು ಕೊಡುತ್ತೇನೆ ಎಂದು ಹೇಳಿದ್ದಾರೆ.
ಬಜ್ಪೆಯ ವಿಮಾನ ನಿಲ್ದಾಣದ ಕನಸು ಕಂಡವರು ಉಳ್ಳಾಲ ಶ್ರೀನಿವಾಸ ಮಲ್ಯ. ಮಲ್ಯರ ಕನಸನ್ನು ನನಸು ಮಾಡಿದ್ದು ಜವಾಹರಲಾಲ್ ನೆಹರೂ. ಆದರೆ, ಈ ವಿಮಾನ ನಿಲ್ದಾಣವನ್ನು ನೀವು ನಿಮ್ಮ ಉದ್ಯಮಿ ಮಿತ್ರ ಗೌತಮ ಅದಾನಿ ಅವರಿಗೆ ಕೊಟ್ಟಿದ್ದೀರಿ. ನವಮಂಗಳೂರು ಬಂದರು ಸಹ ಮಾಜಿ ಸಂಸದ ಶ್ರೀನಿವಾಸ ಮಲ್ಯ ಅವರ ಕನಸಾಗಿತ್ತು. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಪಣಂಬೂರಿನಲ್ಲಿ ಬಂದರಿಗೆ ಚಾಲನೆ ನೀಡಿದ್ದರು. ಈ ಬಂದರನ್ನು ಅದಾನಿಯವರಿಗೆ ಹಂತ ಹಂತವಾಗಿ ಮಾರಲು ಹೊರಟಿದ್ದೀರಿ. ಬಜ್ಪೆ ವಿಮಾನ ನಿಲ್ದಾಣ ಮತ್ತು ಎನ್ಎಂಪಿಟಿ ಮಾತ್ರವಲ್ಲ ಇಲ್ಲಿನ ಪ್ರಾದೇಶಿಕ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್, ಎಂಆರ್‌ಪಿಎಲ್, ಬೈಕಂಪಾಡಿ ಕೈಗಾರಿಕ ಪ್ರದೇಶ, ರಾಷ್ಟ್ರೀಯ ಹೆದ್ದಾರಿ 66 ಹಾಗೂ ರಕ್ತರಹಿತ ಕ್ರಾಂತಿಯನ್ನೇ ಉಂಟು ಮಾಡಿರುವ ಭೂ ಸುಧಾರಣೆ ಕಾಯ್ದೆಗಳು ಜಾರಿಗೆ ಬಂದದ್ದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿ. ಆದರೆ, ಪ್ರಧಾನಿಯಾಗಿ ನಿಮ್ಮ ಹತ್ತು ವರ್ಷದ ಅವಧಿಯಲ್ಲಿ ಇಲ್ಲವೇ ನಿಮ್ಮ ಸಂಸದರು ಈ ಜಿಲ್ಲೆಯನ್ನು ಪ್ರತಿನಿಧಿಸಿದ 33 ವರ್ಷಗಳಲ್ಲಿ ಈ ಜಿಲ್ಲೆಗೆ ನೀವು ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
ಮೂರು ದಶಕಗಳಿಂದ ನಿಮ್ಮ ಪಕ್ಷವನ್ನೇ ಗೆಲ್ಲಿಸುತ್ತಿರುವ ದಕ್ಷಿಣ ಕನ್ನಡದ ಜನತೆಯ ಬಗ್ಗೆ ಯಾಕೆ ನಿಮಗೆ ಈ ಪರಿಯ ದ್ವೇಷ? ಈ ಜಿಲ್ಲೆಯಲ್ಲಿ ಬಹುಸಂಖ್ಯಾತ ಸಮುದಾಯವಾದ ಬಿಲ್ಲವರ ಆರಾಧ್ಯಗುರು ಬ್ರಹ್ಮಶ್ರೀ ನಾರಾಯಣ ಗುರುಗಳು. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ರಾಜ್ಯ ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನ ಮಾಡಲು ಅವಕಾಶ ನೀಡಲಿಲ್ಲ. ನಾರಾಯಣ ಗುರುಗಳಿಗೆ ಹಿಂದೂ ಧರ್ಮದ ಗುರುಗಳ ಪಕ್ಕದಲ್ಲಿ ಜಾಗ ಇಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಾರಾಯಣ ಗುರುಗಳಿಗೆ ನಿಮ್ಮ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಬಡಿದ್ದು ಸಾಕಾಗಲಿಲ್ಲವೆಂದು, ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ನೇಮಿಸಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಾಲಾ ಪಠ್ಯದಲ್ಲಿದ್ದ ನಾರಾಯಣ ಗುರುಗಳ ಪಾಠವನ್ನೂ ಕಿತ್ತು ಹಾಕಿತು. ನಾರಾಯಣ ಗುರುಗಳಿಗೆ ಮಾಡಿರುವ ಅಪಮಾನದ ವಿರುದ್ಧ ಜನ ಸಿಡಿದೆದ್ದು ಪ್ರತಿಭಟನೆ ನಡೆಸಿದರೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದಿದ್ದಾರೆ.
ಜಾತಿ-ಧರ್ಮಗಳ ಅಂತರವನ್ನು ಮೀರಿ ಒಂದು ಕುಟುಂಬದಂತೆ ಸೌಹಾರ್ದತೆಯಿಂದ ಬದುಕುತ್ತಿದ್ದ ಜಿಲ್ಲೆಯನ್ನು ‘ಕೋಮುವಾದದ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸಿದ್ದೇ ನಿಮ್ಮ ಕೊಡುಗೆ. ಇದರ ಫಲವಾಗಿ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಬುದ್ದಿವಂತರ ಜಿಲ್ಲೆ ಎಂದೇ ಖ್ಯಾತಿ ಪಡೆದಿದ್ದ ಜಿಲ್ಲೆ ಈಗ ಕೋಮುವಾದದ ಕಳಂಕ ಹಚ್ಚಿಕೊಂಡು ದೇಶದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.