40% ಸರ್ಕಾರದ ಜಾಹೀರಾತು ವಿಚಾರ: ಸಿದ್ದರಾಮಯ್ಯ, ಡಿಕೆಶಿ ರಾಹುಲ್‌ಗೆ ಸಮನ್ಸ್
x

40% ಸರ್ಕಾರದ ಜಾಹೀರಾತು ವಿಚಾರ: ಸಿದ್ದರಾಮಯ್ಯ, ಡಿಕೆಶಿ ರಾಹುಲ್‌ಗೆ ಸಮನ್ಸ್

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ


ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಬಿಜೆಪಿ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದಿಂದ ಜಾಹೀರಾತು ನೀಡಲಾಗಿತ್ತು. ಹಾಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಕಾಂಗ್ರೆಸ್‌ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ್ದಾರೆ ಎಂದು ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಅವರು ಖಾಸಗಿ ದೂರು ನೀಡಿದ್ದರು.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.

Read More
Next Story