ನನಗೆ ಜೀವ ಬೆದರಿಕೆ ಇತ್ತು: ಶಾಕಿಂಗ್‌ ಹೇಳಿಕೆ ಕೊಟ್ಟ ಸುಮಲತಾ
x

ನನಗೆ ಜೀವ ಬೆದರಿಕೆ ಇತ್ತು: ಶಾಕಿಂಗ್‌ ಹೇಳಿಕೆ ಕೊಟ್ಟ ಸುಮಲತಾ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಜೀವ ಬೆದರಿಕೆ ವಿಚಾರ ಪ್ರಸ್ತಾಪಿಸಿದ್ದಾರೆ.


ಮಂಡ್ಯ: ನನಗೆ ಜೀವ ಬೆದರಿಕೆ ಇತ್ತು, ಆದರೂ ನಾನು ಹೋರಾಡಿದ್ದೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ಬೆದರಿಕೆ ಕರೆ ಮಾಡಿದ್ದರು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ತಮ್ಮ ಅಧಿಕಾರ ಅವಧಿಯ ಕೊನೆ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ʼʼನನಗೆ ನಿರಂತರವಾಗಿ ಜೀವ ಬೆದರಿಕೆ ಕರೆ ಬರುತ್ತಿದ್ದವು. ಕೆಆರ್ಎಸ್ ಉಳಿವಿಗಾಗಿ ಅಕ್ರಮದ ವಿರುದ್ಧ ಹೋರಾಡಿದ್ದೇನೆ. ಹೋರಾಟದ ಫಲವಾಗಿ ಹೈಕೋರ್ಟ್ ಗಣಿಗಾರಿಕೆ ನಿಷೇಧಿಸಿದೆʼʼ ಎಂದು ಹೇಳಿಕೊಂಡಿದ್ದಾರೆ.

ಈ ವೇಳೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಮಲತಾ ಅವರು, ʼʼಹೆಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಹೇಳಿಕೊಳ್ಳಲಿ. ಅಂತೆ ಕಂತೆಗಳನ್ನ ನಾವು ಕೇಳಿಕೊಂಡೇ ಬರುತ್ತಿದ್ದೇವೆ. ಅಂತಿಮವಾಗುವವರೆಗೆ ಏನೂ ಹೇಳುವುದಕ್ಕೆ ಆಗಲ್ಲ. ನನ್ನ ಮುಂದೆ ಹಲವಾರು ಆಯ್ಕೆಗಳಿವೆ. ನನಗೆ ಬೇರೆಡೆ ಟಿಕೆಟ್ ಪಡೆಯುವುದು ಕಷ್ಟವಲ್ಲ. ನಾನು ಕ್ಷೇತ್ರ ಉಳಿಸಿಕೊಳ್ಳಬೇಕು ಅಂತಾ ಹೇಳಿದ್ದೇನೆ. ಅಂತಿಮ ನಿರ್ಧಾರ ಆಗುವವರೆಗೂ ಏನೂ ಹೇಳಲ್ಲʼʼ ಎಂದಿದ್ದಾರೆ.

ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎನ್ನುವುದರ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Read More
Next Story