ನೀವು ನಿಜವಾಗಿಯೂ ದೇವರ ಮಗು: ವಿರಾಟ್ ದಾಖಲೆ ಹೊಗಳಿದ ಅನುಷ್ಕಾ
ಕೊಹ್ಲಿ 50ನೇ ಶತಕ ಬಾರಿಸಿದಾಗ, ಅನುಷ್ಕಾ ಶರ್ಮಾ ಕ್ರೀಡಾಂಗಣದ ಗ್ಯಾಲರಿಯಿಂದ ವಿರಾಟ್ ಕೊಹ್ಲಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ.
ವಿಶ್ವಕಪ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 50ನೇ ಶತಕ ಸಿಡಿಸಿದ ನಂತರ, ಅವರ ಪತ್ನಿ ಅನುಷ್ಕಾ ಶರ್ಮಾ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ಪೋಸ್ಟ್‌ನಲ್ಲಿ ಅನುಷ್ಕಾ, ತಮ್ಮ ಪತಿಗೆ “ನೀವು ನಿಜವಾಗಿಯೂ ದೇವರ ಮಗುʼʼ ಎಂದು ಹೇಳಿದ್ದಾರೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್‌ಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್‌ನ ಫೈನಲ್ ಪ್ರವೇಶಿಸಿದೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ತಮ್ಮ ಪತಿ ವಿರಾಟ್ ಕೊಹ್ಲಿಯನ್ನು ಹುರಿದುಂಬಿಸಲು ವಾಂಖೆಡೆ ಸ್ಟೇಡಿಯಂಗೆ ಬಂದಿದ್ದರು.. ಕೊಹ್ಲಿ 50ನೇ ಶತಕ ಬಾರಿಸಿದಾಗ, ಅನುಷ್ಕಾ ಶರ್ಮಾ ಕ್ರೀಡಾಂಗಣದ ಗ್ಯಾಲರಿಯಿಂದ ವಿರಾಟ್ ಕೊಹ್ಲಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಮೈದಾನದಿಂದ ಫ್ಲೈಯಿಂಗ್ ಕಿಸ್ ನೀಡಿದರು.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 70 ರನ್‌ಗಳ ಜಯ ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ಬುಧವಾರ ಏಕದಿನ ಪಂದ್ಯಗಳಲ್ಲಿ 50ನೇ ಶತಕ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ.
ಸಚಿನ್ ತೆಂಡೂಲ್ಕರ್ ತನ್ನ ದಾಖಲೆಯನ್ನು ಮುರಿದ ಕೊಹ್ಲಿಯನ್ನು ತಬ್ಬಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಕೂಡ ವಿರಾಟ್ ಕೊಹ್ಲಿ ದಾಖಲೆಯನ್ನು ಕೊಂಡಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿ ಹಂಚಿಕೊಂಡಿರುವ ಅನುಷ್ಕಾ ನೀನು ದೇವರ ಮಗು ಎಂದು ಹೇಳಿದ್ದಾರೆ.
“ದೇವರು ಅತ್ಯುತ್ತಮ ಸ್ಕ್ರಿಪ್ಟ್ ರೈಟರ್! ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಸಿಕ್ಕಿರುವುದರ ಜೊತೆಗೆ ವಿರಾಟ್ ಕೊಹ್ಲಿಯ ಪ್ರೀತಿ ಕೂಡ ದೊರೆತಿರುವುದಕ್ಕೆ ಕೃತಜ್ಞನಾಗಿದ್ದೇನೆ. ಮುಂಬರುವ ದಿನಗಳಲ್ಲಿ ವಿರಾಟ್ ಮತ್ತಷ್ಟು ಎತ್ತರಕ್ಕೆ ಬೆಳೆದು ಯಶಸ್ಸು ಗಳಿಸಿ, ಬೆಳವಣಿಗೆ ಹೊಂದಲಿ. ವಿರಾಟ್, ನೀವು ನಿಜವಾಗಿಯೂ ದೇವರ ಮಗುʼʼ ಎಂದು ಅನುಷ್ಕಾ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಹಿಂದಿಕ್ಕಿದ ಕೊಹ್ಲಿ, “ಇದು ನನಗೆ ಕನಸಿನಂತೆ ಭಾಸವಾಗುತ್ತಿದೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.
ಮತ್ತೊಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ಅವರು ಇಡೀ ಭಾರತೀಯ ಕ್ರಿಕೆಟ್ ತಂಡದ ಗೆಲುವಿಗೆ ಅಭಿನಂದಿಸಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ 70 ರನ್‌ಗಳ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಸೇಡುಕೂಡ ತೀರಿಸಿಕೊಂಡಿತು.
ಭಾರತ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ 7 ವಿಕೆಟ್ ಪಡೆದು ಮಿಂಚಿದರೆ, ಬ್ಯಾಟಿಂಗ್ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶತಕ ಸಿಡಿಸಿದರು. ಅದರಲ್ಲೂ ವಿರಾಟ್ ಕೊಹ್ಲಿ 50ನೇ ಏಕದಿನ ಶತಕಗಳನ್ನು ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಕೊಹ್ಲಿಯ ಸಾಧನೆಗೆ ಇಡೀ ಕ್ರಿಕೆಟ್ ಜಗತ್ತೇ ತಲೆಬಾಗಿದೆ.