T20 World Cup 2024: ನಾಳೆ ಭಾರತ-ಪಾಕ್‌ ನಡುವೆ ಹೈವೋಲ್ಟೇಜ್‌ ಪಂದ್ಯ
x

T20 World Cup 2024: ನಾಳೆ ಭಾರತ-ಪಾಕ್‌ ನಡುವೆ ಹೈವೋಲ್ಟೇಜ್‌ ಪಂದ್ಯ


ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಕ ಎದುರಾಳಿಗಳು ಎಂದೆನಿಸಿಕೊಂಡಿರುವ ಭಾರತ-ಪಾಕ್‌ ನಡುವಿನ ಹೈವೊಲ್ಟೇಜ್ ಪಂದ್ಯ ಭಾನುವಾರ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿದ್ದು, ಇದು ಟಿ20 ವಿಶ್ವಕಪ್​ನ 19ನೇ ಪಂದ್ಯವಾಗಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯ ಪಾಕಿಸ್ತಾನ್‌ದ ಪಾಲಿಗೆ ನಿರ್ಣಾಯಕವಾಗಿರಲಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಇದೀಗ ಭಾರತದ ವಿರುದ್ಧ ಸೋತರೆ ಮುಂದಿನ ಹಂತಕ್ಕೇರುವುದು ಪಾಕ್ ಪಾಲಿಗೆ ಕಷ್ಟಕರವಾಗಲಿದೆ. ಹೀಗಾಗಿ ಪಾಕಿಸ್ತಾನ್ ಪಾಲಿಗೆ ನಾಳಿನ (ಜೂ.9) ಪಂದ್ಯ ನಿರ್ಣಾಯಕವಾಗಲಿದೆ.

ಭಾರತ ತಂಡ ಈಗಾಗಲೇ ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದೆ. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಗೆಲುವಿನ ಲಯ ಮುಂದುವರೆಸುವ ಹುಮ್ಮಸ್ಸಿನಲ್ಲಿದೆ. ಅದರಲ್ಲೂ ಭಾರತಕ್ಕೆ ಪಾಕಿಸ್ತಾನ ತಂಡ ಸಾಂಪ್ರಾದಯಕ ಎದುರಾಳಿಯಾಗಿರುವುದರಿಂದ ತನ್ನ ಪಾರುಪತ್ಯ ಮೆರೆಯುವುದನ್ನು ಎದುರು ನೋಡಬಹುದು.

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಯುಎಸ್​ಎ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

Read More
Next Story