ಧೋನಿ ನ್ಯಾಯಾಂಗ ನಿಂದನೆ ಅರ್ಜಿ: ಐಪಿಎಸ್‌ ಅಧಿಕಾರಿಗೆ ಜೈಲು
x

ಧೋನಿ ನ್ಯಾಯಾಂಗ ನಿಂದನೆ ಅರ್ಜಿ: ಐಪಿಎಸ್‌ ಅಧಿಕಾರಿಗೆ ಜೈಲು

ಕ್ರಿಕೆಟಿಗ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.


ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿಗಳಾದ ಎಸ್ ಎಸ್ ಸುಂದರ್ ಮತ್ತು ಸುಂದರ್ ಮೋಹನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂಪತ್ ಕುಮಾರ್ ಅವರಿಗೆ ಅವಕಾಶ ಕಲ್ಪಿಸಲು 30 ದಿನಗಳವರೆಗೆ ಶಿಕ್ಷೆ ಜಾರಿಯನ್ನು ತಡೆಹಿಡಿದಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐಪಿಎಸ್ ಅಧಿಕಾರಿ ವಿರುದ್ಧ

ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ ಧೋನಿ

2014 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್‌ನಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದಕ್ಕಾಗಿ ದೋನಿ, 100 ಕೋಟಿ ರೂಪಾಯಿ ನಷ್ಟ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಮಾಡಿದ ಟೀಕೆಗಳಿಗಾಗಿ ಸಂಪತ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಧೋನಿ ಕೋರಿದ್ದರು.

Read More
Next Story