ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ಫೈನಲ್‌: ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ; ಇಂಡಿಯಾ ಬ್ಯಾಟಿಂಗ್‌
x

ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ಫೈನಲ್‌: ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ; ಇಂಡಿಯಾ ಬ್ಯಾಟಿಂಗ್‌

ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಇಂದು (ಭಾನುವಾರ) ನಡೆಯಲಿರುವ ಐತಿಹಾಸಿಕ ಫೈನಲ್‌ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಮೊದಲು ಬ್ಯಾಟಿಂಗ್‌ಗೆ ಇಳಿಯಲಿದೆ. ಎರಡೂ ತಂಡಗಳು ವಿಶ್ವಕಪ್ ಟ್ರೋಫಿಗಾಗಿ ಸೆಣಸಾಟ ಆರಂಭಿಸಿವೆ.


2025ರ ಮಹಿಳಾ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಇಂದು (ಭಾನುವಾರ) ನಡೆಯಲಿರುವ ಐತಿಹಾಸಿಕ ಫೈನಲ್‌ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಮೊದಲು ಬ್ಯಾಂಟಿಂಗ್‌ಗೆ ಇಳಿಯಲಿದೆ. ಎರಡೂ ತಂಡಗಳು ವಿಶ್ವಕಪ್ ಟ್ರೋಫಿಗಾಗಿ ಸೆಣಸಾಟ ಆರಂಭಿಸಿವೆ.

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ತಂಡವು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಜೆಮಿಮಾ ರೊಡ್ರಿಗಸ್ ಶತಕದ ಸ್ಫೋಟಕ ಆಟ ಹಾಗೂ ರೇಣುಕಾ ಸಿಂಗ್ ಅವರ ಮಾರಕ ಪ್ರಭಾವಿ ಬೌಲಿಂಗ್‌ನಿಂದಾಗಿ ಭಾರತ ತಂಡ ಗೆಲುವಿನ ನಗೆ ಬೀರಿತ್ತು.

ದಕ್ಷಿಣ ಆಫ್ರಿಕಾದ ನಾಯಕಿ ಲೋರಾ ವೋಲ್ವರ್ಡ್ಟ್ ನೇತೃತ್ವದ ತಂಡವು ಇಂಗ್ಲೆಂಡ್‌ ವಿರುದ್ಧ ಕಠಿಣ ಸೆಮಿಫೈನಲ್ ಗೆದ್ದು ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿತ್ತು. ಭಾರತದ ವನಿತೆಯರ ತಂಡ ಮೊದಲಿಗೆ ಬ್ಯಾಟಿಂಗ್‌ ಆರಂಭಿಸಿದ್ದು, ಶಫಾಲಿ ಶರ್ಮಾ ಹಾಗೂ ಸ್ಮೃತಿ ಮಂದಾನ ಜೋಡಿ ಬ್ಯಾಟಿಂಗ್‌ ಆರಂಭಿಸಲಿದೆ. ಜೆಮಿನಾ ರೋಡ್ರಿಗರ್ಸ್‌ ಹಾಗೂ ಹರ್ಮನ್‌ಪ್ರೀತ್‌ ಕೌರ್‌ ಕ್ರಮವಾಗಿ ಮೂರು ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ.

ಮುಂಬೈನಲ್ಲಿ ಕ್ರಿಕೆಟ್‌ ಅಭಿಮಾನಿಗಳಲ್ಲಿ ಸಂತಸ ಜೋರಾಗಿದೆ. ಕ್ರಿಕೆಟ್‌ ವೀಕ್ಷಿಸಲು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಸೇರಿ ಹಲವು ಗಣ್ಯರು ಆಗಮಿಸಿದ್ದಾರೆ.

Read More
Next Story