ಬೇಲೂರಿನಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳ ಶಿಫ್ಟ್; ಚಿಕ್ಕಮಗಳೂರಿನಲ್ಲಿ ಅಸಮಾಧಾನ
ಹಾಸನದ ಬೇಲೂರಿನ 38 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿದೆ. ಥರ್ಮಲ್ ಡ್ರೋನ್ ಬಳಕೆಯ ಕಾರ್ಯಾಚರಣೆಗೆ ಚಿಕ್ಕಮಗಳೂರು ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.
ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಬೀಡುಬಿಟ್ಟಿರುವ 38 ಕಾಡಾನೆಗಳ ಹಿಂಡನ್ನು ಚಿಕ್ಕಮಗಳೂರಿನ ಭದ್ರಾ ವನ್ಯಜೀವಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆನೆಗಳ ಚಲನವಲನ ಪತ್ತೆಹಚ್ಚಲು ಥರ್ಮಲ್ ಡ್ರೋನ್‌ಗಳ ಬಳಕೆ ಮಾಡಲಾಗುತ್ತಿದೆ. ಆದರೆ, ಆನೆಗಳನ್ನು ಚಿಕ್ಕಮಗಳೂರು ಭಾಗಕ್ಕೆ ಸ್ಥಳಾಂತರಿಸುವ ನಿರ್ಧಾರಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಕಾಡಾನೆಗಳ ಸಮಸ್ಯೆ ಎದುರಿಸುತ್ತಿರುವ ಚಿಕ್ಕಮಗಳೂರಿಗೆ ಮತ್ತಷ್ಟು ಆನೆಗಳ ಸ್ಥಳಾಂತರದ ಅಗತ್ಯವೇನು ಎಂಬ ಪ್ರಶ್ನೆ ಎದ್ದಿದೆ. ಅರಣ್ಯ ಇಲಾಖೆಯ ಕಾರ್ಯಾಚರಣೆ ಈಗ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
Next Story
