ಅಸ್ಸಾಂನಲ್ಲಿ ಭೀಕರ ಪ್ರವಾಹ: ಧನ್ಸಿರಿ ನದಿ ಉಕ್ಕಿ ಹರಿದು ಹಲವು ಗ್ರಾಮಗಳು ಜಲಾವೃತ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಧನ್ಸಿರಿ ನದಿ ಉಕ್ಕಿ ಹರಿಯುತ್ತಿದೆ. ಸಾವಿರಕ್ಕೂ ಹೆಚ್ಚು ಜನರು ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಿಗೆ ತೆರಳಿದ್ದಾರೆ.
ಅಸ್ಸಾಂನಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ನಜಿರಾ, ಶಿವಸಾಗರ್, ಸಾದೆ, ಮಂಗಳದೋಯಿ ಸೇರಿದಂತೆ ಹಲವು ಪ್ರದೇಶಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಧನ್ಸಿರಿ ನದಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ.
ಪ್ರವಾಹದಿಂದ ಸಾವಿರಕ್ಕೂ ಹೆಚ್ಚು ಜನರು ಮನೆ ಕಳೆದುಕೊಂಡು ಸರ್ಕಾರ ಸ್ಥಾಪಿಸಿರುವ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಜಾನುವಾರುಗಳನ್ನು ಬಿಟ್ಟು ಬರಲಾಗದ ಕೆಲವರು ತಮ್ಮ ಮನೆಗಳ ಮೇಲ್ಭಾಗದಲ್ಲೇ ಆಶ್ರಯ ಪಡೆದಿದ್ದಾರೆ. ಕದ್ಗುರಿ ಮತ್ತು ಲಾಂಗ್ದೈ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಇನ್ನೂ ಜನರು ಸಿಲುಕಿಕೊಂಡಿರುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ.
Next Story

