Cabinet Meeting| ಆನೇಕಲ್‌ನಲ್ಲಿ ವಿಶ್ವದರ್ಜೆಯ ಕ್ರಿಕೆಟ್ ಕ್ರೀಡಾಂಗಣ: ಸಚಿವ ಸಂಪುಟದಿಂದ ತಾತ್ವಿಕ ಅನುಮೋದನೆ
x

Cabinet Meeting| ಆನೇಕಲ್‌ನಲ್ಲಿ ವಿಶ್ವದರ್ಜೆಯ ಕ್ರಿಕೆಟ್ ಕ್ರೀಡಾಂಗಣ: ಸಚಿವ ಸಂಪುಟದಿಂದ ತಾತ್ವಿಕ ಅನುಮೋದನೆ

ಬೃಹತ್ ಕ್ರೀಡಾಂಗಣವನ್ನು ಅಂದಾಜು 2,350 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣ ಪೂರ್ಣಗೊಂಡರೆ ಭಾರತದ ಎರಡನೇ ಅತಿದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರದ 4ನೇ ಹಂತದಲ್ಲಿ ಅಂತರಾಷ್ಟ್ರೀಯ ಮಟ್ಟದ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟವು ಗುರುವಾರ ಮಹತ್ವದ 'ತಾತ್ವಿಕ ಅನುಮೋದನೆ' ನೀಡಿದೆ.

ಬೃಹತ್ ಕ್ರೀಡಾಂಗಣವನ್ನು ಅಂದಾಜು 2,350 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣ ಪೂರ್ಣಗೊಂಡರೆ ಭಾರತದ ಎರಡನೇ ಅತಿದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಗ್ರಾಮದ ಸೂರ್ಯನಗರ 4ನೇ ಹಂತದಲ್ಲಿ ಲಭ್ಯವಿರುವ 75 ಎಕರೆ ಜಮೀನಿನಲ್ಲಿ ಈ ಕ್ರೀಡಾಂಗಣ ತಲೆ ಎತ್ತಲಿದ್ದು, ಬರೋಬ್ಬರಿ 80 ಸಾವಿರ ಆಸನಗಳ ಸಾಮರ್ಥ್ಯ ಹೊಂದಿರಲಿದೆ. ಬೆಂಗಳೂರಿನ ಸದ್ಯದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 38 ಸಾವಿರ ಆಸನ ಸಾಮರ್ಥ್ಯಕ್ಕಿಂತ ದೊಡ್ಡದಾಗಿರಲಿದೆ.

ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸುತ್ತಿರುವ ಈ ಕ್ರೀಡಾ ಸಂಕೀರ್ಣದಲ್ಲಿ ಕ್ರಿಕೆಟ್ ಮಾತ್ರವಲ್ಲದೇ ಒಳಾಂಗಣ ಮತ್ತು ಹೊರಾಂಗಣ ಸೇರಿ ಸುಮಾರು 24 ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭೆಗಳಿಗಾಗಿ 3,000 ಆಸನಗಳ ಬೃಹತ್ ಸಭಾಂಗಣ ನಿರ್ಮಾಣವಾಗಲಿದೆ. ಕ್ರೀಡಾಂಗಣದ ಸುತ್ತಮುತ್ತ ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು ಮತ್ತು ಇತರ ಪೂರಕ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಂತಹ ಘಟನೆಗಳು ಮತ್ತು ಹೆಚ್ಚುತ್ತಿರುವ ಜನಸಂದಣಿಯ ದೃಷ್ಟಿಯಿಂದ ಬೆಂಗಳೂರಿಗೆ ಮತ್ತೊಂದು ಬೃಹತ್ ಮತ್ತು ಸುರಕ್ಷಿತ ಅಂತರಾಷ್ಟ್ರೀಯ ಕ್ರೀಡಾಂಗಣದ ಅವಶ್ಯಕತೆವಿದೆ ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

Read More
Next Story