CM responds to student protests: Green signal to fill 2.80 lakh vacant posts!
x

ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: 2.80 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

ಒಳ ಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


Click the Play button to hear this message in audio format

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.84 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ವಿದ್ಯಾರ್ಥಿಗಳ ಒತ್ತಾಯಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉದ್ಯೋಗ ನೇಮಕಾತಿ ಆರಂಭಿಸುವಂತೆ ಮಂಗಳವಾರ (ಫೆ.24) ಧಾರವಾಡದಲ್ಲಿ ವಿದ್ಯಾರ್ಥಿ ಹಾಗೂ ಉದ್ಯೋಗಾಕಾಂಕ್ಷಿಗಳ ಸಂಘಟನೆಯು ಬೃಹತ್‌ ಪ್ರತಿಭಟನೆ ನಡೆಸಿತ್ತು. ವಿರೋಧ ಪಕ್ಷಗಳು ಕೂಡ ವಿದ್ಯಾರ್ಥಿಗಳ ಪ್ರತಿಭಟನೆ ಬೆಂಬಲಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

ಕಾರ್ಕಳದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಳ ಮೀಸಲಾತಿ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಉದ್ಯೋಗ ಒದಗಿಸಲು ಸರ್ಕಾರ ಬದ್ಧವಾಗಿದೆ. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆನೆ ಹಾವಳಿ ತಡೆಗೆ ಕ್ರಮ

" ರಾಜ್ಯದಲ್ಲಿ ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದೆ. ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ" ಎಂದರು.

ಮಾದಕವಸ್ತುಗಳ ನಿಗ್ರಹ

ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವುದು ದುರಂತ. ಗಾಂಜಾ ಸೇರಿದಂತೆ ಮಾದಕವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ಯಾರಂಟಿಗೆ 1.20 ಲಕ್ಷ ಕೋಟಿ ರೂ.

ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52,000 ಕೋಟಿ ರೂ. ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1.20 ಲಕ್ಷ ಕೋಟಿ ರೂ. ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

ಪರಿಸರವಾದಿಗಳೊಂದಿಗೆ ಚರ್ಚೆ

ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡುವ ಬಗ್ಗೆ ಪರಿಸರವಾದಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾರ್ಕಾಳದಲ್ಲಿ ಪರುಶರಾಮ ಥೀಂ ಪಾರ್ಕ್ ಶೀಘ್ರವೇ ಪೂರ್ಣಗೊಳಿಸಲಾಗುವುದು. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕರು ಸಚಿವರಾಗಲು ಬಯಸುತ್ತಿರುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎನ್ನುವ ಮೂಲಕ ಶಾಸಕ ಪ್ರದೀಪ್‌ ಈಶ್ವರ್‌ ಸೇರಿದಂತೆ ಮೊದಲ ಬಾರಿ ಗೆದ್ದ ಹಲವು ಶಾಸಕರಿಗೆ ನಿರಾಸೆ ಮೂಡಿಸಿದರು.

Read More
Next Story