Thousands of Aadhaar cards found on the banks of Netravati river! UT Khadar orders investigation
x

ನೇತ್ರಾವತಿ ನದಿ ತೀರದಲ್ಲಿ ಸಿಕ್ಕಿರುವ ಆಧಾರ್‌ ಕಾರ್ಡ್‌ಗಳು 

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳ ಪತ್ತೆ! ಏನಿದು ಹಗರಣ?

ನೇತ್ರಾವತಿ ನದಿಯಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ ತೇಲಿ ಬಂದಿದ್ದು, ಈ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಪರಿಶೀಲನೆ ನಡೆಸಿದ್ದಾರೆ.


Click the Play button to hear this message in audio format

ಮಂಗಳೂರಿನ ಫರಂಗಿಪೇಟೆಯ 10ನೇ ಮೈಲಿಕಲ್ಲು ಸಮೀಪ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಪುದು ಗ್ರಾಮದ ವಿಳಾಸವಿರುವ ಆಧಾರ್ ಕಾರ್ಡ್‌ಗಳು ದೊರೆತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಗುರುವಾರ (ಮಾ.5) ನೇತ್ರಾವತಿ ನದಿಯಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ ತೇಲಿ ಬಂದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಆಧಾರ್‌ ಕಾರ್ಡ್ ಪತ್ತೆ ಸಂಬಂಧ ತನಿಖೆ ನಡೆಸಲು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದು ಸೂಚಿಸಿದ್ದಾರೆ.

ತನಿಖೆಗೆ ಸ್ಥಳೀಯರ ಆಗ್ರಹ

ಪುದು ಗ್ರಾಮದ ವಿಳಾಸದಲ್ಲಿರುವ ಆಧಾರ್ ಕಾರ್ಡ್‌ಗಳ ಬಗ್ಗೆ ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಆತಂಕ ವ್ಯಕ್ತಪಡಿಸಿದ್ದು, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ವತಿಯಿಂದ ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪಿರಲಿಲ್ಲ. ಬದಲಿಗೆ ಸಾರ್ವಜನಿಕರೇ ಹಣ ಭರಿಸಿ ಸೈಬರ್ ಕೇಂದ್ರಗಳಿಂದ ಆಧಾರ್ ಡೌನ್ಲೋಡ್ ಮಾಡಿಸಿಕೊಂಡಿದ್ದೆವು. ಈಗ ದಿಢೀರನೇ ಸಾವಿರಾರು ಸಂಖ್ಯೆಯ ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಚಾರ. ಇದರ ಹಿಂದಿರುವವರ ಪತ್ತೆಗೆ ಕ್ರಮ ವಹಿಸಬೇಕು ಹಾಗೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸಾವಿರಾರು ಆಧಾರ್ ಕಾರ್ಡ್ ಪತ್ತೆಯಾಗಿರುವ ಬಗ್ಗೆ ಉನ್ನತಾಧಿಕಾರಿಗಳು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಶಾಸಕರಿಗೂ ದೂರು ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಂತರಿಕ ಮೀಸಲಾತಿ ಬಿಕ್ಕಟ್ಟು

ಪರಿಶಿಷ್ಟ ಜಾತಿಗಳಿಗೆ ಆಂತರಿಕ ಮೀಸಲಾತಿ ಒದಗಿಸುವ ವಿಚಾರದಲ್ಲಿ ಬಿಕ್ಕಟ್ಟು ತಲೆದೋರಿದೆ. ಈ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು. ಬೆಳಗಾವಿ ಜಿಲ್ಲೆ ವಿಭಜನೆಗೆ ಶಾಸಕರು ಒತ್ತಡ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಶಾಸಕರು ಭೇಟಿಯಾಗಿ ಮನವಿ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ

Read More
Next Story