ತಮಿಳುನಾಡಿಗೆ 3,500 ಕ್ಯುಸೆಕ್ ನೀರು ಹರಿಸಲು CWMA ಆದೇಶ; ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದೇ ಕರ್ನಾಟಕ?
ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕದ ಮೇಲ್ಮನವಿಯನ್ನು ತಳ್ಳಿ ಹಾಕಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ . ರಾಜ್ಯದಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆ ನೀರಿನ ಸಂಗ್ರಹ ಮತ್ತು ಕುಡಿಯುವ ನೀರಿನ ಆತಂಕದ ನಡುವೆಯೇ ಈ ಆದೇಶ ಹೊರಬಿದ್ದಿದೆ. ಇದರಿಂದ ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ನಿರ್ದೇಶನವನ್ನು ಎತ್ತಿ ಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA), ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು 4 ಟಿಎಂಸಿ ನೀರನ್ನು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
Next Story

