ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ: ದೆಹಲಿ-NCRನಲ್ಲಿ GRAP-3 ಜಾರಿ
ವಾಯುಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. GRAP-3 ಅಡಿಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸುವ ಮೂಲಕ ಮಾಲಿನ್ಯದ ಮೂಲಗಳನ್ನು ನಿಯಂತ್ರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದೆ. ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿ-NCR ವ್ಯಾಪ್ತಿಯಲ್ಲಿ GRAP-3 ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಕಟ್ಟುನಿಟ್ಟಿನ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂಡಿಯಾ ಗೇಟ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ದೆಹಲಿಯ ಇತ್ತೀಚಿನ ದೃಶ್ಯಗಳು ಇಲ್ಲಿವೆ.
Next Story
