Everyone, including the CM, is in support, secrets with the high command will not be revealed: DKshivakumar
x

ಡಿಸಿಎಂ ಡಿ.ಕೆ. ಶಿವಕುಮಾರ್‌

ಬಜೆಟ್ ಸಭೆ ಕೈಬಿಟ್ಟು ದೆಹಲಿಗೆ ಡಿ.ಕೆ.ಶಿವಕುಮಾರ್‌ : ರಾಹುಲ್ ಗಾಂಧಿ ಜತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ?

ಡಿ.ಕೆ. ಶಿವಕುಮಾರ್ ದೆಹಲಿ ಭೇಟಿಯು ಕೇವಲ ಆಡಳಿತಾತ್ಮಕವಾಗಿರದೆ, ರಾಜಕೀಯವಾಗಿಯೂ ಹೆಚ್ಚಿನ ಮಹತ್ವ ಪಡೆದಿದೆ. ರಾಹುಲ್ ಗಾಂಧಿ ಅವರೊಂದಿಗೆ ನಾಯಕತ್ವದ ಬದಲಾವಣೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿರುವ ಹೊತ್ತಿನಲ್ಲಿಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಇಲಾಖೆಯ ಅತ್ಯಂತ ಪ್ರಮುಖ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದೆ. ಇಲಾಖಾ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಈ ಸಭೆಯಲ್ಲಿ ಭಾಗವಹಿಸಿ ಇಲಾಖೆಯ ಬೇಡಿಕೆಗಳು ಮತ್ತು ಯೋಜನೆಗಳ ಬಗ್ಗೆ ಚರ್ಚಿಸಬೇಕಿತ್ತು. ಆದರೆ, ಈ ಸಭೆಗೆ ಹಾಜರಾಗುವ ಬದಲಿಗೆ ಅವರು ಹೈಕಮಾಂಡ್ ಕರೆ ಮೇರೆಗೆ ದೆಹಲಿಗೆ ತೆರಳಿದ್ದಾರೆ.

ದೆಹಲಿ ಭೇಟಿ ವೇಳೆ ರಾಜ್ಯದ ನೀರಾವರಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರ ಜತೆ ಚರ್ಚೆ ನಡೆಸಲಿದ್ದಾರೆ. ಡಿ.ಕೆ. ಶಿವಕುಮಾರ್ ದೆಹಲಿ ಭೇಟಿಯು ಕೇವಲ ಆಡಳಿತಾತ್ಮಕವಾಗಿರದೆ, ರಾಜಕೀಯವಾಗಿಯೂ ಹೆಚ್ಚಿನ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರೊಂದಿಗೆ ರಾಜ್ಯ ಸರ್ಕಾರದ ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ತಮ್ಮ ಸಂಘಟನಾ ಶಕ್ತಿ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷನಾಗಿ ನಮ್ಮ ಸಂಸದರನ್ನು ಮತ್ತು ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಅಲ್ಲಿ ನನ್ನ ಕಷ್ಟ-ಸುಖಗಳನ್ನು ಹಂಚಿಕೊಳ್ಳುತ್ತೇನೆ ಎಂದು ಹೇಳಿರುವುದು, ಪಕ್ಷದ ಒಳಗಿನ ಆಂತರಿಕ ಬೆಳವಣಿಗೆಗಳು ಮತ್ತು ನಾಯಕತ್ವದ ಪೈಪೋಟಿಯ ಕುರಿತಾದ ಊಹಾಪೋಹಗಳಿಗೆ ಮರುಜೀವ ನೀಡಿದಂತಾಗಿದೆ.

ವಿಶ್ವಸನೀಯ ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರೊಂದಿಗೆ ರಾಜ್ಯ ಸರ್ಕಾರದ ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ತಮ್ಮ ಸಂಘಟನಾ ಶಕ್ತಿ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಮೇಕೆದಾಟು ಸೇರಿದಂತೆ ರಾಜ್ಯದ ಬಾಕಿ ಇರುವ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಾಗುವುದು. ರಾಜ್ಯದ ನೀರಾವರಿ ಯೋಜನೆಗಳಿಗೆ ಎದುರಾಗಿರುವ ಕಾನೂನು ಅಡೆತಡೆಗಳ ನಿವಾರಣೆಗೆ ಸಂಬಂಧಿಸಿದಂತೆ ದೆಹಲಿಯ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೇ, ಕೆಪಿಸಿಸಿ ಅಧ್ಯಕ್ಷರಾಗಿ ಮಾರ್ಚ್ 10ಕ್ಕೆ ಆರು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಾಗುವುದು ಎಂದರು.

ನಾನು, ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ

ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು, ಹೇಳಿಕೆ ಕೊಡುವುದರಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ‌. ಮಂಗಳವಾರ ಎಐಸಿಸಿಯಲ್ಲಿ ಸಭೆಯಿದೆ. ವಿವಿಧ ಚುನಾವಣೆಗಳು ಹಾಗೂ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗುವುದು. ಚುನಾವಣಾ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆಯಿದೆ. ಆದ ಕಾರಣಕ್ಕೆ ನನ್ನನ್ನು ಚರ್ಚೆ ನಡೆಸಲು ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ ಎಂದರು.

ಎಲ್ಲರೂ ಬಾಯಿಮುಚ್ಚಿಕೊಂಡು ಇರಬೇಕು ಆದೇಶವನ್ನು ಪಾಲನೆ ಮಾಡಬೇಕು

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು. ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ ಎಂದು ಹೇಳಿದ ಅವರು, ಪ್ರತಿದಿನವೂ ನನಗೆ ಶುಭದಿನ, ಶುಭ ಜೀವನ, ಶುಭ ಪ್ರಾರಂಭ, ಯಶಸ್ಸಿನ ದಿನ, ಪ್ರತಿದಿನವೂ ಕಷ್ಟದ ದಿನವೇ. ಪ್ರತಿದಿನವೂ ಏನೂ ಸುಲಭವಾಗಿ ಇರುವುದಿಲ್ಲ. ಜನರ ಕಷ್ಟಗಳನ್ನು ಬಗೆಹರಸಿಬೇಕಾದರೆ ಕಷ್ಟ ಕಾರ್ಪಣ್ಯಗಳು, ಅಡಚಣೆಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇ ಬೇಕು. ನಮ್ಮ ಕೆಲಸವನ್ನು ಮುಂದುವರೆಸಲೇ ಬೇಕು ಎಂದು ಉತ್ತರಿಸಿದರು.

Read More
Next Story