IPL Final: Major flyovers in the city to be closed tonight! Here are the details of alternative routes
x

ಎಲೆಕ್ಟ್ರಾನಿಕ್ ಸಿಟಿ ಫೈಓವರ್‌

IPL ಫೈನಲ್: ನಗರದ ಪ್ರಮುಖ ಫ್ಲೈಓವರ್‌ಗಳು ಇಂದು ರಾತ್ರಿ ಬಂದ್! ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಸಂಚಾರ ದಕ್ಷಿಣ ವಿಭಾಗದ ವ್ಯಾಪ್ತಿಗೆ ಬರುವ ಪ್ರಮುಖ ಎಲಿವೇಟೆಡ್ ಮತ್ತು ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ಭಾನುವಾರ ರಾತ್ರಿ 11ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.


Click the Play button to hear this message in audio format

19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಹೈವೋಲ್ಟೇಜ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂದ್ಯದ ಸಮಯದಲ್ಲಿ ಹಾಗೂ ಫಲಿತಾಂಶದ ನಂತರ ನಗರದೆಲ್ಲೆಡೆ ಭಾರಿ ಪ್ರಮಾಣದಲ್ಲಿ ವಿಜಯೋತ್ಸವ ಆಚರಿಸುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆಯು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಸಂಚಾರ ದಕ್ಷಿಣ ವಿಭಾಗದ ವ್ಯಾಪ್ತಿಗೆ ಬರುವ ಪ್ರಮುಖ ಎಲಿವೇಟೆಡ್ ಮತ್ತು ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ಭಾನುವಾರ ರಾತ್ರಿ 11ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಯಾವ ಫ್ಲೈಓವರ್‌ಗಳೂ ಬಂದ್‌ ?

ರೂಪೇನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಎಲೆಕ್ಟ್ರಾನಿಕ್ ಸಿಟಿಯಿಂದ ರೂಪೇನ ಅಗ್ರಹಾರದ ಕಡೆಗೆ ಚಲಿಸುವ ಎರಡೂ ಬದಿಯ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಾಗಿಗುಡ್ಡ ಕಡೆಯಿಂದ 5ನೇ ಮೈನ್ ಹೊರವರ್ತುಲ ರಸ್ತೆ (ORR) ಹಾಗೂ ಹೊಸೂರು ರಸ್ತೆ ಕಡೆಗೆ ತೆರಳುವ ಮತ್ತು 5ನೇ ಮೈನ್ ಹೊರವರ್ತುಲ ರಸ್ತೆಯಿಂದ ರಾಗಿಗುಡ್ಡ ಕಡೆಗೆ ಹೋಗುವ ಎರಡೂ ಬದಿಯ ಮಾರ್ಗಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ

ಫ್ಲೈಓವರ್‌ಗಳ ಮೇಲೆ ಸಂಚಾರ ನಿಷೇಧಿಸಲಾಗಿದ್ದರೂ, ಫ್ಲೈಓವರ್ ಕೆಳಗಿನ ಮುಖ್ಯ ರಸ್ತೆಗಳು ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಮುಕ್ತವಾಗಿರಲಿವೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಳಗಿನ ರಸ್ತೆಗಳನ್ನು ಬಳಸಿಕೊಂಡು ಸಂಚಾರ ಪೊಲೀಸರೊಂದಿಗೆ ಸಹಕರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Next Story