
ನಮ್ಮ ಮೆಟ್ರೋ ನೇರಳೆ ಮಾರ್ಗ
ಮೆಟ್ರೋ ಪ್ರಯಾಣಿಕರೇ ಗಮನಿಸಿ : ಭಾನುವಾರ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ಇಲ್ಲ
ಬೆಳಿಗ್ಗೆ 9ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಯಥಾಸ್ಥಿತಿಯಲ್ಲಿ ಸಂಚರಿಸಲಿವೆ. ಪ್ರಯಾಣಿಕರು ಸಮಯದ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸುವಂತೆ ನಮ್ಮ ಮೆಟ್ರೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಭಾನುವಾರ ಮೆಟ್ರೋದಲ್ಲಿ ಪ್ರಯಾಣಿಸಲು ಯೋಜಿಸಿದ್ದೀರಾ? ಹಾಗಿದ್ದಲ್ಲಿ ಈ ಸುದ್ದಿ ನಿಮಗಾಗಿ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೇ 17 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ ನಡುವೆ ಅತ್ಯಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಳಿಗಳ ಸುರಕ್ಷತೆ ಮತ್ತು ತಾಂತ್ರಿಕ ಸುಸ್ಥಿತಿಯ ದೃಷ್ಟಿಯಿಂದ ಈ ಕಾಮಗಾರಿ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಿಂದ ಎಲ್ಲಿಯವರೆಗೆ ವ್ಯತ್ಯಯ?
ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರವಿರುವುದಿಲ್ಲ. ಸೇವೆ ಸ್ಥಗಿತದ ಅವಧಿಯಲ್ಲಿ ಚಲಘಟ್ಟದಿಂದ ವಿಜಯನಗರದವರೆಗೆ ಮತ್ತು ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ವರೆಗೆ. ಹಸಿರು ಮಾರ್ಗದಲ್ಲಿ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ ರೈಲು ಸಂಚಾರ ಎಂದಿನಂತೆ ಇರಲಿದೆ. ಹಳದಿ ಮಾರ್ಗದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಚಾರ ಲಭ್ಯವಿರುತ್ತದೆ.
ಸಾರ್ವಜನಿಕರಿಗೆ ಸೂಚನೆ
ಬೆಳಿಗ್ಗೆ 9ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಯಥಾಸ್ಥಿತಿಯಲ್ಲಿ ಸಂಚರಿಸಲಿವೆ. ಪ್ರಯಾಣಿಕರು ಸಮಯದ ಈ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸುವಂತೆ ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

