ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ- ಕೊನೆಯ ವಿಡಿಯೋ ಈಗ ವೈರಲ್!
x
ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿಜೆ ರಾಯ್

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ- ಕೊನೆಯ ವಿಡಿಯೋ ಈಗ ವೈರಲ್!

ಬೆಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಅವರು ಹಂಚಿಕೊಂಡಿದ್ದ ಕೊನೆಯ ವಿಡಿಯೋ ಸಂಚಲನ ಮೂಡಿಸಿದೆ.


ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿಜೆ ರಾಯ್ (66) ಅವರು ಶುಕ್ರವಾರ (ಜನವರಿ 30) ಬೆಂಗಳೂರಿನ ರಿಚ್‌ಮಂಡ್ ಸರ್ಕಲ್ ಬಳಿ ಇರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸುತ್ತಿದ್ದ ಸಂದರ್ಭದಲ್ಲೇ ಈ ಘಟನೆ ಸಂಭವಿಸಿರುವುದು ಭಾರಿ ಸಂಚಲನ ಮೂಡಿಸಿದೆ. ಈ ನಡುವೆ ಅವರ ಕೊನೆಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ ವೈರಲ್‌ ಆಗುತ್ತಿದೆ.

ಗಮನ ಸೆಳೆದ ಕೊನೆಯ ಸೋಶಿಯಲ್ ಮೀಡಿಯಾ ಪೋಸ್ಟ್:

ತಮ್ಮ ಸಾವಿಗಿಂತ ಕೇವಲ ನಾಲ್ಕು ದಿನಗಳ ಮೊದಲು, ಅಂದರೆ 77ನೇ ಗಣರಾಜ್ಯೋತ್ಸವದಂದು ಸಿಜೆ ರಾಯ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಈಗ ಮುನ್ನೆಲೆಗೆ ಬಂದಿದೆ. ತಮ್ಮ 1.3 ಮಿಲಿಯನ್ ಫಾಲೋವರ್ಸ್‌ಗಳಿಗೆ ಶುಭಾಶಯ ಕೋರಿದ್ದ ಅವರು, "ಜಾಗರೂಕರಾಗಿರಿ, ಬೈ" ಎಂದು ಹೇಳುವ ಮೂಲಕ ವಿಡಿಯೋ ಮುಗಿಸಿದ್ದರು. ಸದ್ಯ ಈ ವಿಡಿಯೋದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳಾಗುತ್ತಿವೆ.

ಘಟನೆಯ ವಿವರ

ಶುಕ್ರವಾರ (ಜನವರಿ 30, 2026) ಬೆಂಗಳೂರಿನ ರಿಚ್‌ಮಂಡ್ ಸರ್ಕಲ್ ಬಳಿ ಇರುವ ಕಾನ್ಫಿಡೆಂಟ್ ಗ್ರೂಪ್‌ನ ಪ್ರಧಾನ ಕಚೇರಿಯಲ್ಲಿ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಕಚೇರಿಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲೇ, ರಾಯ್ ಅವರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೆರಿಗೆ ವಂಚನೆ ಮಾಡಿರುವ ಆರೋಪದ ಮೇಲೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದರು ಎನ್ನಲಾಗಿದೆ. ರಾಯ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳದಿಂದ ನಿರ್ಗಮಿಸಿದ್ದರು ಎಂದು ವರದಿಯಾಗಿದೆ.

ಯಾರು ಈ ಸಿಜೆ ರಾಯ್?

ಮೂಲತಃ ಕೇರಳದ ಕೊಚ್ಚಿಯವರಾದ ಇವರು ಬೆಂಗಳೂರಿನಲ್ಲಿ ನೆಲೆಸಿ ಕಾನ್ಫಿಡೆಂಟ್ ಗ್ರೂಪ್ ಎಂಬ ಬೃಹತ್ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನು ಕಟ್ಟಿದ್ದರು. ರಿಯಲ್ ಎಸ್ಟೇಟ್ ಮಾತ್ರವಲ್ಲದೆ, ಚಲನಚಿತ್ರೋದ್ಯಮದಲ್ಲೂ ಸಕ್ರಿಯರಾಗಿದ್ದ ರಾಯ್ ಅವರು ಎಂಟು ಕನ್ನಡ ಮತ್ತು ಮಲಯಾಳಂ ಸಿನಿಮಾಗಳನ್ನು ನಿರ್ಮಿಸಿದ್ದರು. ದಕ್ಷಿಣ ಭಾರತದ ಹಲವು ಸ್ಟಾರ್ ನಟರ ಚಿತ್ರಗಳಿಗೆ ಇವರು ಬಂಡವಾಳ ಹೂಡಿದ್ದರು.

Read More
Next Story