ರಾಯ್​ ಸಿಜೆ ಪ್ರಕರಣ, ಬೆಂಗಳೂರು ಪೊಲೀಸ್ ಕಮಿಷನರ್ ಹೇಳುವುದೇನು?
x

ರಾಯ್​ ಸಿಜೆ ಪ್ರಕರಣ, ಬೆಂಗಳೂರು ಪೊಲೀಸ್ ಕಮಿಷನರ್ ಹೇಳುವುದೇನು?

ಪ್ರಾಥಮಿಕ ವರದಿಗಳ ಪ್ರಕಾರ, ಕಳೆದ 2-3 ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ತಪಾಸಣೆ ಮತ್ತು ವಿಚಾರಣೆ ನಡೆಸುತ್ತಿದ್ದರು. ಘಟನೆ ನಡೆದ ಸಂದರ್ಭದಲ್ಲೂ ಐಟಿ ತಂಡದ ವಿಚಾರಣೆ ನಡೆಯುತ್ತಿತ್ತು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.


Click the Play button to hear this message in audio format

ರಿಯಲ್​ ಎಸ್ಟೇಟ್​ ದಿಗ್ಗಜ ಕಾನ್ಫಿಡೆಂಟ್​​ ಗ್ರೂಪ್​ನ ರಾಯ್​ ಸಿ. ಜೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಮಾಧ್ಯಮ ನೀಡಿದ್ದಾರೆ. "ಇಂದು ಮಧ್ಯಾಹ್ನ ಸುಮಾರು 3ರಿಂದ 3.15 ರ ಸಮಯದಲ್ಲಿ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಸಿ.ಜೆ. ರಾಯ್ ಅವರು ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇದು ಆತ್ಮಹತ್ಯೆ ಎಂದು ತಿಳಿದುಬಂದಿದೆ. ಆದರೂ, ಈ ಬಗ್ಗೆ ಸಂಪೂರ್ಣ ತನಿಖೆ ಮತ್ತು ವಿಚಾರಣೆ ನಡೆಯಬೇಕಿದೆ." ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಕಳೆದ 2-3 ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ತಪಾಸಣೆ ಮತ್ತು ವಿಚಾರಣೆ ನಡೆಸುತ್ತಿದ್ದರು. ಘಟನೆ ನಡೆದ ಸಂದರ್ಭದಲ್ಲೂ ಐಟಿ ತಂಡದ ವಿಚಾರಣೆ ನಡೆಯುತ್ತಿತ್ತು. ನಮ್ಮ ಪೊಲೀಸ್ ಅಧಿಕಾರಿಗಳು ಐಟಿ ತಂಡದ ಜೊತೆ ಸಂಪರ್ಕದಲ್ಲಿದ್ದಾರೆ. ಸದ್ಯಕ್ಕೆ ತಿಳಿದುಬಂದಿರುವ ಮಾಹಿತಿಯಂತೆ, ಇದು ಕೇರಳ ಮೂಲದ ಐಟಿ ತಂಡ ಎಂದು ಹೇಳಲಾಗುತ್ತಿದೆ." ಎಂದು ಅವರು ಮಾಹಿತಿ ನೀಡಿದ್ದಾರೆ.

ಅಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು

"ಘಟನೆ ನಡೆದ ತಕ್ಷಣ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿನ ವೈದ್ಯರು ರಾಯ್ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ನಮ್ಮ ವಿಧಿವಿಜ್ಞಾನ ತಂಡ ಮತ್ತು ಮ್ಯಾಜಿಸ್ಟ್ರೇಟ್ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದೆ. ಐಟಿ ದಾಳಿಯ ಕುರಿತು ನಮಗೆ ಸಂಪೂರ್ಣ ಮಾಹಿತಿ ಇಲ್ಲದಿದ್ದರೂ, ಆತ್ಮಹತ್ಯೆ ನಡೆದಿರುವುದರಿಂದ ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ. ಎಂದು ಅವರು ಹೇಳಿದ್ದಾರೆ.


(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್‌: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

Read More
Next Story