
ಅನಧಿಕೃತ ಫ್ಲೆಕ್ಸ್‌ಗಳನ್ನು ಜಿಬಿಎ ಅಧಿಕಾರಿಗಳು ತೆರವುಗೊಳಿಸಿದ್ದರು.
ಇಂದಿರಾನಗರದಲ್ಲಿ ಕಾರ್ಯಾಚರಣೆ: ಅನಧಿಕೃತ ಬ್ಯಾನರ್, ಫ್ಲೆಕ್ಸ್‌ಗಳ ತೆರವಿಗೆ ಮುಂದಾದ ಜಿಬಿಎ
ಇತ್ತೀಚೆಗಷ್ಟೇ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜಕೀಯ ನಾಯಕರ ಹುಟ್ಟುಹಬ್ಬದ ಶುಭಾಶಯಗಳು, ಕಾರ್ಯಕ್ರಮಗಳ ಪ್ರಚಾರ ಸೇರಿದಂತೆ ನಗರದಾದ್ಯಂತ ರಾರಾಜಿಸುತ್ತಿದ್ದ ಸಾವಿರಾರು ಅನಧಿಕೃತ ಫ್ಲೆಕ್ಸ್‌ಗಳನ್ನು ಜಿಬಿಎ ಅಧಿಕಾರಿಗಳು ತೆರವುಗೊಳಿಸಿದ್ದರು.
ನಗರದ ಸೌಂದರ್ಯವನ್ನು ಹಾಳುಮಾಡುತ್ತಿರುವ ಅನಧಿಕೃತ ಬ್ಯಾನರ್‌ಗಳು, ಫ್ಲೆಕ್ಸ್‌ಗಳು ಮತ್ತು ಜಾಹೀರಾತು ಫಲಕಗಳ ವಿರುದ್ಧ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಸಮರ ಸಾರಿದೆ. ಇದರ ಅಂಗವಾಗಿ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ (ಬೆಂಗಳೂರು ಕೇಂದ್ರ ನಗರ ಪಾಲಿಕೆ) ಅಧಿಕಾರಿಗಳು ಭಾನುವಾರ ಇಂದಿರಾನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಅನುಮತಿಯಿಲ್ಲದೆ ಅಳವಡಿಸಲಾಗಿದ್ದ ಹಲವು ಅನಧಿಕೃತ ಫ್ಲೆಕ್ಸ್‌ಗಳು ಮತ್ತು ಜಾಹೀರಾತು ಫಲಕಗಳನ್ನು ತೆರವುಗೊಳಿಸಿದ್ದಾರೆ.
ನಗರದ ಸೌಂದರ್ಯವನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ನಾಗರಿಕ ನಿಯಮಾವಳಿಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಈ ದಿಢೀರ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗರಿಕರಲ್ಲಿ ಜಿಬಿಎ ಮನವಿ
"ಬೆಂಗಳೂರು ನಗರವನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ನಿಯಮಾನುಸಾರ ಪೂರ್ವಾನುಮತಿ ಪಡೆಯದೆ ರಸ್ತೆ ಬದಿ, ಫುಟ್‌ಪಾತ್ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಬ್ಯಾನರ್‌ಗಳು ಅಥವಾ ಫ್ಲೆಕ್ಸ್‌ಗಳನ್ನು ಅಳವಡಿಸಬಾರದು" ಎಂದು ಅಧಿಕಾರಿಗಳು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜಕೀಯ ನಾಯಕರ ಹುಟ್ಟುಹಬ್ಬದ ಶುಭಾಶಯಗಳು, ಕಾರ್ಯಕ್ರಮಗಳ ಪ್ರಚಾರ ಸೇರಿದಂತೆ ನಗರದಾದ್ಯಂತ ರಾರಾಜಿಸುತ್ತಿದ್ದ ಸಾವಿರಾರು ಅನಧಿಕೃತ ಫ್ಲೆಕ್ಸ್‌ಗಳನ್ನು ಜಿಬಿಎ ಅಧಿಕಾರಿಗಳು ತೆರವುಗೊಳಿಸಿದ್ದರು. ಇದೀಗ ವಾಣಿಜ್ಯ ಪ್ರದೇಶವಾದ ಇಂದಿರಾನಗರದಲ್ಲಿ ಈ ಕಾರ್ಯಾಚರಣೆ ಮುಂದುವರಿದಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಎಚ್ಚರಿಕೆಯನ್ನೂ ಜಿಬಿಎ ನೀಡಿದೆ.

