KSRTC: 144 ಇವಿ ಬಸ್ ಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ
x
ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. 

KSRTC: 144 ಇವಿ ಬಸ್ ಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ

ಆದಾಯವನ್ನು ಹೆಚ್ಚಿಸಲು ಸರ್ಕಾರವು ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಮಹಾನಗರ ಪಾಲಿಕೆಗಳ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ.


ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಬಲಪಡಿಸಲು ಸರ್ಕಾರ ಮುಂದಾಗಿದ್ದು, ಸುಮಾರು 62 ಕೋಟಿ ರೂಪಾಯಿ ವೆಚ್ಚದಲ್ಲಿ 144 ಹೊಸ BS-VI ಮಾದರಿಯ ನಗರ ಸಾರಿಗೆ ಡೀಸೆಲ್ ಬಸ್‌ಗಳ ಖರೀದಿಗೆ ಸಚಿವ‌‌ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ‌ ಎಚ್.ಕೆ.ಪಾಟೀಲ್, ಶ್ರೀರಂಗಪಟ್ಟಣ ತಾಲ್ಲೂಕಿನ ವಿರಿಜಾದೇವಿ ದೇವಾಲಯ ಸೇರಿದಂತೆ ಪ್ರಮುಖ ನಾಲೆಗಳ ಅಭಿವೃದ್ಧಿಗೆ 60 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅಲ್ಲದೆ, ಬೀದರ್ ಜಿಲ್ಲೆಯ ಮಾಂಜ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಪುನಶ್ಚೇತನ ಕಾಮಗಾರಿಗೆ 151.70 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಅನುಮೋದಿಸಲಾಗಿದೆ ಎಂದರು.

ಆದಾಯವನ್ನು ಹೆಚ್ಚಿಸಲು ಸರ್ಕಾರವು ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಮಹಾನಗರ ಪಾಲಿಕೆಗಳ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ. ಇನ್ನು ಮುಂದೆ ಜಾಹೀರಾತುಗಳ ಮೇಲೆ ಕೇವಲ 'ಶುಲ್ಕ' ವಿಧಿಸುವ ಬದಲಿಗೆ ಮಾರುಕಟ್ಟೆ ಆಧಾರಿತ ತೆರಿಗೆ ವಿಧಿಸಲು ಮತ್ತು ಪರವಾನಗಿ ಪ್ರಕ್ರಿಯೆಯನ್ನು ಸರಳಗೊಳಿಸಲು ಈ ತಿದ್ದುಪಡಿ ಪೂರಕವಾಗಲಿದೆ.

ಗೃಹ ಇಲಾಖೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ, ಐಸಿಜೆಎಸ್ ಮತ್ತು ಐಟಿ ಸೇವೆಗಳ ಅನುಷ್ಠಾನಕ್ಕಾಗಿ 227.58 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಇತರ ಪ್ರಮುಖ ನಿರ್ಧಾರಗಳು

ರಾಜ್ಯದಲ್ಲಿ ಮುಷ್ಕರ ನಡೆಸುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳೊಂದಿಗೆ ತಕ್ಷಣ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ.

ಮಲ್ಲೇಶ್ವರಂನ ಮಹಾರಾಣಿ ಲಕ್ಷ್ಮಮ್ಮಣ್ಣಿ ಕಾಲೇಜು ಟ್ರಸ್ಟ್‌ನ ಜಮೀನು ಗುತ್ತಿಗೆ ಅವಧಿ ವಿಸ್ತರಣೆ ಪ್ರಸ್ತಾವನೆಯನ್ನು ಹೆಚ್ಚಿನ ಮಾಹಿತಿ ಕೋರಿ ಸದ್ಯಕ್ಕೆ ಮುಂದೂಡಲಾಗಿದೆ.

Read More
Next Story