ಪಾದಚಾರಿ ಒತ್ತುವರಿ ತೆರವು ಬೆನ್ನಲ್ಲೇ ಅನಾಥ ವಾಹನಗಳ ತೆರವು
ಬೆಂಗಳೂರಿನ ಪಾದಚಾರಿ ಮಾರ್ಗಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಅನಾಥ ವಾಹನಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಕಿರಿಕಿರಿ ಮತ್ತು ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಬೆಂಗಳೂರಿನ ಪಾದಚಾರಿ ಮಾರ್ಗಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಅನಾಥ ವಾಹನಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಕಿರಿಕಿರಿ ಮತ್ತು ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಕೃಷ್ಣ ಬೈರೇಗೌಡರು, ಎಚ್ಚರಿಕೆ ನೀಡಿದರೂ ತೆರವುಗೊಳಿಸದ ವಾಹನಗಳಿಗೆ ನೋಟಿಸ್ ಸ್ಟಿಕ್ಕರ್ ಅಂಟಿಸಿದರು. ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಿಸುವ ಅಭಿಯಾನ ಇದಾಗಿದೆ.
Next Story

