ಹಾಸನದಲ್ಲಿ ಕಾಡಾನೆಗಳ ಹಾವಳಿಗೆ ಬ್ರೇಕ್- 56 ಆನೆಗಳ ಸ್ಥಳಾಂತರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್
ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆ 56 ಆನೆಗಳ ಸ್ಥಳಾಂತರ, 10 ಪುಂಡಾನೆಗಳ ಸೆರೆಗೆ ಸರ್ಕಾರ ಮೆಗಾ ಕಾರ್ಯಾಚರಣೆಗೆ ಆದೇಶಿಸಿದೆ.
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಗೆ ಮೂರು ದಿನಗಳ ಅಂತರದಲ್ಲಿ ಇಬ್ಬರು ಬಲಿಯಾಗಿದ್ದು, ಜನರ ಆಕ್ರೋಶಕ್ಕೆ ಮಣಿದ ಸರ್ಕಾರ ಮೆಗಾ ಆಪರೇಷನ್‌ಗೆ ಆದೇಶಿಸಿದೆ. ಬೇಲೂರು ಭಾಗದಲ್ಲಿ ಆರು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭವಾಗಲಿದ್ದು, 56 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಹಾಗೂ 10 ಪುಂಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಜ್ಜಾಗಿದೆ. ಈ ಕಾರ್ಯಾಚರಣೆಯಿಂದ ಕಾಡಾನೆ-ಮಾನವ ಸಂಘರ್ಷಕ್ಕೆ ಕಡಿವಾಣ ಬೀಳುತ್ತಾ?
Next Story
