ಭಾರೀ ಮಳೆ- ತುಂಗಾ ಜಲಾಶಯದ 22 ಗೇಟ್‌ಗಳು ಓಪನ್, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗ ಅಕ್ಷರಶಃ ನಡುಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಹಲವು ಸೂಕ್ಷ್ಮ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗ ಅಕ್ಷರಶಃ ನಡುಗಿದೆ. ಶಿವಮೊಗ್ಗದ ತುಂಗಾ ಜಲಾಶಯದ ಎಲ್ಲಾ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನೀರು ಬಿಡಲಾಗುತ್ತಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಹಲವು ಸೂಕ್ಷ್ಮ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿ ವಾತಾವರಣ ಮುಂದುವರಿದಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story

