ಪ್ರತಾಪ್ ಸಿಂಹಗೆ ಹೈಕೋರ್ಟ್ ಶಾಕ್ | ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು ಮಾಡಲು ನಕಾರ
ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. 2024ರ ಸೆಪ್ಟೆಂಬರ್ನಲ್ಲಿ ಯಾದಗಿರಿಯ ಶಹಾಪುರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಡಿದ ಭಾಷಣ ಪ್ರಚೋದನಕಾರಿ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ಮತ್ತು 299ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು. ಭಾಷಣದ ಹಿಂದಿನ ಉದ್ದೇಶದ ಬಗ್ಗೆ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. ಯಾವುದೇ ಗಲಭೆ ನಡೆದಿಲ್ಲ ಎಂಬ ಕಾರಣಕ್ಕೆ ಪ್ರಕರಣ ಕೈಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದೇ ಪ್ರಕರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರಿಗೆ ಮಾತ್ರ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಇದೀಗ ಪ್ರತಾಪ್ ಸಿಂಹ ತನಿಖೆ ಎದುರಿಸಬೇಕಾಗಿದೆ.
Next Story
