ಬರಪಟ್ಟಿಗೆ ಗದಗ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಎಚ್‌.ಕೆ.ಪಾಟೀಲ್‌ ಎಚ್ಚರಿಕೆ
x

ಬರಪಟ್ಟಿಗೆ ಗದಗ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

ಸ್ವತಃ ಮುಖ್ಯಮಂತ್ರಿಯವರೇ ಕದಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ಮಾಡಿದ್ದಾರೆ. ಇಷ್ಟಾದರೂ ಬರಪೀಡಿತ ತಾಲೂಕು ಎಂದು ಘೋಷಿಸದಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ ಎಂದು ಶಾಸಕ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.


ಅ.10ರೊಳಗೆ ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದೇ ಹೋದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗದಗ ತಾಲೂಕಿನ ಮುಳಗುಂದದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪಟ್ಟಿಯಲ್ಲಿ ತಾಲೂಕಿನ ಹೆಸರು ಘೋಷಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ನೇತೃತ್ವದಲ್ಲಿ ಸಭೆ ಮಾಡಿ, ಅಧಿಕಾರಿಗಳ ವರದಿ ಪಡೆಯಲಾಗಿದೆ. ಸ್ವತಃ ಮುಖ್ಯಮಂತ್ರಿಯವರೇ ಕದಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ಮಾಡಿದ್ದಾರೆ. ಇಷ್ಟಾದರೂ ಬರಪೀಡಿತ ತಾಲೂಕು ಎಂದು ಘೋಷಿಸದಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದೆ. ತಾನು ರೈತರ ಪರ ಇದ್ದವನು, ಜೊತೆಗೆ ನಮ್ಮದೂ ರೈತ ಕುಟುಂಬ. ರೈತರ ಪರಿಸ್ಥಿತಿ ಬಗ್ಗೆ ಅರಿವಿದೆ. ತನ್ನನ್ನು ಶಾಸಕರನ್ನಾಗಿ ಮಾಡಿದ ನಾಯಕರು ಇಲ್ಲಿದ್ದಾರೆ. ಬರಪೀಡಿತ ತಾಲೂಕು ಎಂದು ಘೋಷಿಸಲು ಪ್ರಯತ್ನ ಮಾಡುತ್ತೇನೆ. ಸಾಧ್ಯವಾಗದೇ ಹೋದರೆ ಅ.10ರ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ 73 ತಾಲೂಕುಗಳ ಪೈಕಿ 27 ತಾಲೂಕುಗಳ ಬರಪೀಡಿತ ಪ್ರದೇಶವಲ್ಲ ಎಂದು ಕೈ ಬಿಡಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಹಾಗೂ ಒಣಹವೆ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊದಲ ಹಂತದಲ್ಲಿ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಅದಾದ ಬಳಿಕ ಮತ್ತೆ 23 ತಾಲೂಕುಗಳನ್ನು ಈ ಪಟ್ಟಿಗೆ ಸೇರಿಸಿ ಒಟ್ಟು 124 ತಾಲೂಕುಗಳು ಬರಪೀಡಿತ ಎಂದು ಪರಿಗಣಿಸಿತ್ತು.

Read More
Next Story