Bengaluru Flights| ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಾಯುಪ್ರದೇಶ ನಿರ್ಬಂಧ: 42 ವಿಮಾನಗಳ ಸಂಚಾರ ರದ್ದು
x
42 ವಿಮಾನಗಳ ಹಾರಾಟ ರದ್ದುಗೊಂಡಿದೆ.

Bengaluru Flights| ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಾಯುಪ್ರದೇಶ ನಿರ್ಬಂಧ: 42 ವಿಮಾನಗಳ ಸಂಚಾರ ರದ್ದು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ 42 ವಿಮಾನಗಳ ಸಂಚಾರ ರದ್ದಾಗಿದೆ. ಯುಎಇನಲ್ಲಿ ಸಿಲುಕಿರುವ 109 ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದಿದ್ದಾರೆ.


Click the Play button to hear this message in audio format

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಾಯುಪ್ರದೇಶದ ನಿರ್ಬಂಧಗಳ ಹಿನ್ನೆಲೆಯಲ್ಲಿ ಇಂದು ಮಂಗಳವಾರ (ಮಾರ್ಚ್ 3, 2026) ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ಲಭ್ಯವಿರುವ ಮಾಹಿತಿಯಂತೆ ಒಟ್ಟು 42 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ರದ್ದಾದ ವಿಮಾನಗಳ ವಿವರ

ವಾಯುಪ್ರದೇಶದ ನಿರ್ಬಂಧದ ಹಿನ್ನೆಲೆಯಲ್ಲಿ ಮಾರ್ಚ್ 3, 2026ರ ಮಧ್ಯಾಹ್ನ 3 ಗಂಟೆಯವರೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 42 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ 21 ಆಗಮನ ಮತ್ತು 21 ನಿರ್ಗಮನ ವಿಮಾನಗಳು ಸೇರಿವೆ. ಈ ವ್ಯತ್ಯಯದಿಂದಾಗಿ ಮುಖ್ಯವಾಗಿ ಅಬುಧಾಬಿ, ರಿಯಾದ್, ಜೆಡ್ಡಾ, ದಮ್ಮಾಮ್, ದುಬೈ ಮತ್ತು ದೋಹಾ ಸೇರಿದಂತೆ ಪ್ರಮುಖ ನಗರಗಳ ವಿಮಾನ ಸಂಚಾರದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ.

ವಾಯುಪ್ರದೇಶದ ನಿರ್ಬಂಧದ ಹಿನ್ನೆಲೆಯಲ್ಲಿ ಮಾರ್ಚ್ 3, 2026ರ ಮಧ್ಯಾಹ್ನ 3 ಗಂಟೆಯವರೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 42 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ 21 ಆಗಮನ ಮತ್ತು 21 ನಿರ್ಗಮನ ವಿಮಾನಗಳು ಸೇರಿವೆ. ಮುಖ್ಯವಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳ (Middle East) ಸಂಚಾರಕ್ಕೆ ಹೆಚ್ಚಿನ ಅಡ್ಡಿಯಾಗಿದ್ದು, ಈ ಭಾಗದ ಪ್ರಮುಖ ನಗರಗಳಾದ ಅಬುಧಾಬಿ, ರಿಯಾದ್, ಜೆಡ್ಡಾ, ದಮ್ಮಾಮ್, ದುಬೈ ಮತ್ತು ದೋಹಾಗೆ ಸಂಚರಿಸುವ ವಿಮಾನಯಾನಗಳು ಸ್ಥಗಿತಗೊಂಡಿವೆ.

ವಾಯುಪ್ರದೇಶದ ನಿರ್ಬಂಧದ ಕಾರಣ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನದ ಸ್ಥಿತಿಗತಿಯನ್ನು ಆಯಾ ವಿಮಾನಯಾನ ಸಂಸ್ಥೆಗಳ ಮೂಲಕ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಯು ಇಂದು ಸಂಜೆಯ ವೇಳೆಗೆ ಲಭ್ಯವಾಗಲಿದೆ.

ವಾಯುಪ್ರದೇಶ ಬಂದ್: ಅತಂತ್ರರಾದ ಪ್ರಯಾಣಿಕರು

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ದಾಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರ ಸುರಕ್ಷತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತುರ್ತು ನೆರವು ಕೋರಿದ್ದಾರೆ. ಯುಎಇ, ಕತಾರ್ ಹಾಗೂ ಬನ್ ಸೇರಿದಂತೆ ವಿವಿಧ ಪಶ್ಚಿಮ ಏಷ್ಯಾ ದೇಶಗಳಲ್ಲಿ ಸಾವಿರಾರು ಸಂಖ್ಯೆಯ ಭಾರತೀಯರು ಅತಂತ್ರರಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ಯಾಡಿಗೆ ಕರೆತರಲು ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ವೇಗವಾಗಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ಅಲ್ಲಿ ವಾಸಿಸುವ, ಕೆಲಸ ಮಾಡುವ ಹಾಗೂ ಪ್ರವಾಸದಲ್ಲಿರುವ ಕನ್ನಡಿಗರ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಇತ್ತೀಚಿನ ಸಲಹೆಗಳ ಪ್ರಕಾರ, ಅನೇಕ ದೇಶಗಳು ತಮ್ಮ ವಾಯುಪ್ರದೇಶದ ಮೇಲೆ ನಿರ್ಬಂಧಗಳನ್ನು ವಿಧಿಸಿವೆ. ಇದರಿಂದ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ದೊಡ್ಡ ಮಟ್ಟದ ಅಡ್ಡಿಯಾಗಿದ್ದು, ಪ್ರಮುಖವಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರು ಮತ್ತು ಭಾರತದ ವಿವಿಧ ರಾಜ್ಯಗಳ ಪ್ರಜೆಗಳು ಸಿಲುಕಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಹಗೆತನ ಮತ್ತು ವಾಯುಪ್ರದೇಶ ಮುಚ್ಚುವಿಕೆಯ ನಿರ್ಧಾರವು ವಿದೇಶದಲ್ಲಿರುವ ಭಾರತೀಯರ ಕುಟುಂಬಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ ಎಂದು ಅವರು ತಿಳಿಸಿದ್ದಾರೆ.

Read More
Next Story