ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ: ಏ.30 ರಿಂದ ಪರೀಕ್ಷೆ ಆರಂಭ
x

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ: ಏ.30 ರಿಂದ ಪರೀಕ್ಷೆ ಆರಂಭ

ಏ.30 ರಿಂದ ಮೇ 13ರವರೆಗೆ ಪಿಯು ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಪ್ರಮುಖ ವಿಷಯಗಳ ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ.


Click the Play button to hear this message in audio format

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪರೀಕ್ಷೆ -1 ಅನುತ್ತೀರ್ಣರಾದವರು ಅಥವಾ ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಏ.30 ರಿಂದ ಮೇ 13ರವರೆಗೆ ಪರೀಕ್ಷೆಗಳು ನಡೆಯಲಿವೆ.

ಎಲ್ಲಾ ಪ್ರಮುಖ ವಿಷಯಗಳ ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಮತ್ತು ಕೌಶಲ್ಯಾಧಾರಿತ ವಿಷಯಗಳಿಗೆ ಮಾತ್ರ ಸಮಯಾವಕಾಶದಲ್ಲಿ ಬದಲಾವಣೆ ಮಾಡಲಾಗಿದ್ದು, ಮಧ್ಯಾಹ್ನದ ಅವಧಿಯಲ್ಲಿಯೂ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಏ.30 ರಂದು ಪರೀಕ್ಷೆಯ ಮೊದಲ ದಿನವಾಗಿದ್ದು, ಪ್ರಥಮ ಭಾಷೆಗಳಾದ ಕನ್ನಡ ಹಾಗೂ ಅರೇಬಿಕ್ ವಿಷಯಗಳ ಪರೀಕ್ಷೆ ನಡೆಯಲಿದೆ. ಮೇ 1ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರೀಕ್ಷೆಗೆ ರಜೆ ಇರಲಿದೆ.

ಮೇ 2 ಎಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ , ಲೆಕ್ಕಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಮೇ 3 ಭಾನುವಾರ ರಜೆ ಇರಲಿದೆ. ಮೇ 4 ರಂದು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಮೇ 5 ರಂದು ವ್ಯವಹಾರ ಅಧ್ಯಯನ , ಭೌತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ ವಿಷಯಗಳ ಪರೀಕ್ಷೆ ಜರುಗಲಿದೆ. ಮೇ 6 ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ, ಮೇ 7ರಂದು ಇತಿಹಾಸ, ಗಣಿತ, ಗೃಹ ವಿಜ್ಞಾನ ವಿಷಯಗಳ ಪರೀಕ್ಷೆ ನಿಗದಿಯಾಗಿದೆ. ಮೇ 8ರಂದು ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ ಮತ್ತು ಕಂಪ್ಯೂಟರ್‌ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಮೇ 9ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮೇ 10 ಭಾನುವಾರ ರಜೆ ಇರಲಿದೆ. ಮೇ 11ರಂದು ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ , ಮೇ 12 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಯ ಕೊನೆಯ ದಿನ ಮೇ 13 ದಂದು ಎರಡು ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಭಾಷಾ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2 ರಿಂದ ಸಂಜೆ 4:15 ರವರೆಗೆ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ , ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್ ನೆಸ್ ಮುಂತಾದ ಕೌಶಲ್ಯಾಧಾರಿತ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

Read More
Next Story