
Karnataka Budget 2026|ರಾಮನಗರ, ಶಿಡ್ಲಘಟ್ಟದಲ್ಲಿ ಸಿಲ್ಕ್ ಪಾರ್ಕ್; ರೇಷ್ಮೆ ಬೆಳೆಗಾರರಿಗೆ ಬಜೆಟ್‌ನಲ್ಲಿ ಬಂಪರ್
ಸಿಎಂ ಸಿದ್ದರಾಮಯ್ಯ ಅವರಿಂದ ದಾಖಲೆಯ 17ನೇ ಕರ್ನಾಟಕ ರಾಜ್ಯ ಬಜೆಟ್ 2026-27 ಮಂಡನೆ. ರಾಜ್ಯದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಲಿರುವ ಈ ಆಯವ್ಯಯದ ಪ್ರಮುಖ ಅಂಶಗಳು ಮತ್ತು ನೇರ ಅಪ್‌ಡೇಟ್ಸ್ ಇಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯಯ ಕೇವಲ ಅಂಕಿ-ಅಂಶಗಳ ಆಟವಲ್ಲ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಲಿದೆ.
ದಾಖಲೆಯ ಸರದಾರನ ಆಯವ್ಯಯ
ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದು. ಇನ್ನು ರಾಷ್ಟ್ರಮಟ್ಟದಲ್ಲಿ ಗಮನಿಸುವುದಾದರೆ, ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವರಾಗಿ ಅವರು ಗುರುತಿಸಿಕೊಂಡಿದ್ದಾರೆ. ಅನುಭವದ ಭಂಡಾರವೇ ಆಗಿರುವ ಸಿಎಂ, ಈ ಬಾರಿ ರಾಜ್ಯದ ಜನರ ನಿರೀಕ್ಷೆಗಳನ್ನು ಹೇಗೆ ಸರಿದೂಗಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
Live Updates
- 6 March 2026 10:29 AM IST
ರಾಜ್ಯ ಬಜೆಟ್ ಆರಂಭ
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಬಜೆಟ್ ಗಾತ್ರ ಹೆಚ್ಚಳವಾಗಿದೆ.
- 6 March 2026 10:27 AM IST
ಬಜೆಟ್‌ಗೆ ಸಿಂಗಾರಗೊಂಡ ವಿಧಾನಸೌಧದ ಮುಖ್ಯದ್ವಾರ
ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್‌ಗೆ ವಿಧಾನಸೌಧ ಸಿಂಗಾರಗೊಂಡಿದ್ದು, ಮುಖ್ಯದ್ವಾರದಲ್ಲಿ "2026-27ನೇ ಸಾಲಿನ ಆಯವ್ಯಯ ಮಂಡನೆ" ಎಂದು ಹೂವಿನಲ್ಲಿ ಅಲಂಕಾರಗೊಳಿಸಲಾಗಿದೆ.

- 6 March 2026 10:24 AM IST
ಬಜೆಟ್ ಮಂಡನೆ ಆರಂಭ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡನೆ ಆರಂಭಿಸಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.
- 6 March 2026 10:08 AM IST
ಬಜೆಟ್‌ಗೆ ಸಚಿವ ಸಂಪುಟ ಅಸ್ತು!
ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡನೆಗೆ ಅಂತಿಮ ಹಂತದ ತಯಾರಿ ಮುಗಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವ ಮುನ್ನ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಬಜೆಟ್‌ಗೆ ಅನುಮೋದನೆ ಪಡೆದುಕೊಂಡಿದ್ದಾರೆ.
- 6 March 2026 9:45 AM IST
ಬಜೆಟ್| ವಿಶೇಷ ಸಚಿವ ಸಂಪುಟ ಆರಂಭ
2026-27ನೇ ಸಾಲಿನ ಬಜೆಟ್‌ಗೆ ಅನುಮೋದನೆ ಪಡೆಯಲು ವಿಶೇಷ ಸಚಿವ ಸಂಪುಟ ಆರಂಭವಾಗಿದೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಸಚಿವರು ಭಾಗಿಯಾಗಿದ್ದಾರೆ.
- 6 March 2026 9:25 AM IST
ರಾಜ್ಯ ಬಜೆಟ್ ಗಾತ್ರ 4.56 ಲಕ್ಷ ಕೋಟಿ ರೂ.
ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ 2026-27ನೇ ಸಾಲಿನ ಬಜೆಟ್ ಗಾತ್ರ 4.49 ಲಕ್ಷ ಕೋಟಿ ರೂ. ಆಗಿದ್ದು, ಈ ಹಿಂದೆ ಮಂಡಿಸಿದ್ದ 2025-26 ನೇ ಸಾಲಿನ ಬಜೆಟ್ 4.09 ಲಕ್ಷ ಕೋಟಿ ರೂ. ನಿಂದ ಕೂಡಿತ್ತು.
- 6 March 2026 9:18 AM IST
ಬೆಳಗ್ಗೆ 10 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ
ಸಿಎಂ ಸಿದ್ದರಾಮಯ್ಯ ಶುಕ್ರವಾರ(ಮಾ.6) ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9.45 ಗಂಟೆಗೆ ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ.
- 6 March 2026 8:02 AM IST
ಬಸ್ ನಿಲ್ದಾಣಗಳಲ್ಲಿ ಸಿದ್ದರಾಮಯ್ಯ 17ನೇ ಬಜೆಟ್ ನೇರ ಪ್ರಸಾರ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿರುವ ಈ ಐತಿಹಾಸಿಕ ಬಜೆಟ್ ಅನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.
ರಾಜ್ಯದ ಆಯ್ದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಎಲ್‌ಇಡಿ (LED) ಪರದೆಗಳು ಮತ್ತು ಟಿವಿಗಳಲ್ಲಿ ಇಂದು ಬೆಳಗ್ಗೆ 10.15ರಿಂದ ಬಜೆಟ್‌ನ ನೇರ ಪ್ರಸಾರವಾಗಲಿದೆ. ದೂರದ ಊರುಗಳಿಗೆ ಪ್ರಯಾಣಿಸುವ ಜನರು ಅಥವಾ ಬಸ್ ನಿಲ್ದಾಣಗಳಲ್ಲಿ ಕಾಯುವ ಪ್ರಯಾಣಿಕರು ಬಜೆಟ್‌ನ ಕ್ಷಣ ಕ್ಷಣದ ಮಾಹಿತಿಯನ್ನು ಈ ಪರದೆಗಳ ಮೂಲಕ ಪಡೆಯಬಹುದಾಗಿದೆ.

