Compassionate Jobs for Families of SC/ST Atrocity Victims: A Historic Cabinet Decision
x

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

Cabinet Meeting: ಮಾ. 6ಕ್ಕೆ ರಾಜ್ಯ ಬಜೆಟ್ ಮಂಡನೆ: ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಗ್ರೀನ್ ಸಿಗ್ನಲ್

ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಮುಖ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಫೆಬ್ರುವರಿ 12) ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ, ಕ್ರೀಡೆ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಬಹುನಿರೀಕ್ಷಿತ ಐಪಿಎಲ್ ಪಂದ್ಯಾವಳಿ ಆಯೋಜನೆಗೂ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಮುಖ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನದ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಅಧಿವೇಶನ ನಡೆಯಲಿದೆ. ಮಾರ್ಚ್ 6ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಆಯವ್ಯಯ (ಬಜೆಟ್) ಮಂಡಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಷರತ್ತುಬದ್ಧ ಒಪ್ಪಿಗೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಸಂಪುಟ ಅನುಮತಿ ನೀಡಿದೆ. ಆದರೆ, ಇದಕ್ಕೆ ತಜ್ಞರ ಸಮಿತಿಯ ವರದಿಯನ್ನು ಆಧಾರವಾಗಿಟ್ಟುಕೊಂಡು ಕಠಿಣ ಷರತ್ತು ವಿಧಿಸಲಾಗಿದೆ. ಕೆಎಸ್‌ಸಿಎ (KSCA) ಈಗಾಗಲೇ ಕುನ್ಹಾ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಪಂದ್ಯಗಳು ನಡೆಯುವ ಸಂದರ್ಭದಲ್ಲಿಯೇ ಫೇಸ್-1 ಮತ್ತು ಫೇಸ್-2 ಕಾಮಗಾರಿಗಳನ್ನು ಮುಂದುವರಿಸಬೇಕು. ತಜ್ಞರ ಸಮಿತಿಯು ಕಾಲಕಾಲಕ್ಕೆ ಕಾಮಗಾರಿಗಳ ಪ್ರಗತಿ ಮತ್ತು ಆಸನಗಳ ವ್ಯವಸ್ಥೆಯನ್ನು ಪರಿಶೀಲಿಸಲಿದೆ. ಅಭಿಮಾನಿಗಳ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಆದ್ಯತೆ ನೀಡಬೇಕು. ಕೆಎಸ್‌ಸಿಎ ಭರವಸೆ ಪಾಲಿಸದಿದ್ದರೆ ಅನುಮತಿ ಮರುಪರಿಶೀಲನಗೆ ಒಳಪಡಲಿದೆ.

ಬೆಂಗಳೂರು ಟರ್ಫ್ ಕ್ಲಬ್ ಸ್ಥಳಾಂತರ

ಬೆಂಗಳೂರು ಟರ್ಫ್ ಕ್ಲಬ್‌ಗೆ ತುಮಕೂರು ಜಿಲ್ಲೆಯ ಕುಣಿಗಲ್ ಸ್ಟಡ್ ಫಾರಂನಲ್ಲಿ 110 ಎಕರೆ 20 ಗುಂಟೆ ಜಮೀನು (ಬ್ಲಾಕ್-ಎ ಮತ್ತು ಬ್ಲಾಕ್-ಬಿ ಸೇರಿ) ನೀಡಲು ತೀರ್ಮಾನಿಸಲಾಗಿದೆ. 29 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗುತ್ತದೆ. ಮುಂದಿನ ಎರಡು ವರ್ಷಗಳ ಒಳಗೆ ಟರ್ಫ್ ಕ್ಲಬ್ ಬೆಂಗಳೂರಿನಿಂದ ಅಲ್ಲಿಗೆ ಸ್ಥಳಾಂತರಗೊಳ್ಳಬೇಕು. ಟರ್ಫ್ ಕ್ಲಬ್ ಜಾಗವನ್ನು ಸರ್ಕಾರ 'ಲಂಗ್ ಸ್ಪೇಸ್' (ಉಸಿರಾಡುವ ತಾಣ) ಆಗಿ ಉಳಿಸಿಕೊಳ್ಳಲು ಮುಂದಾಗಲಾಗಿದೆ.

'ಶಕ್ತಿ' ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ

ಮಹಿಳೆಯರ ಉಚಿತ ಪ್ರಯಾಣದ 'ಶಕ್ತಿ' ಯೋಜನೆಗೆ ಇನ್ನುಮುಂದೆ ಆಧಾರ್ ಕಾರ್ಡ್ ಬದಲು ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ. ನಾಲ್ಕೂ ಸಾರಿಗೆ ನಿಗಮಗಳಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗಲಿದ್ದು, ಇದನ್ನು ತೋರಿಸಿ ಉಚಿತ ಪ್ರಯಾಣ ಮಾಡಬಹುದು.

ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ

ರಾಜ್ಯದ ಸರ್ಕಾರಿ ಶಾಲೆಯ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು 104 ಕೋಟಿ ರೂ. ವೆಚ್ಚದ ಖರೀದಿಗೆ ಸಂಪುಟ ಒಪ್ಪಿಗೆ ನೀಡಿದೆ.

ದೇವನಹಳ್ಳಿಯಲ್ಲಿ 'ಶಾಶ್ವತ ಕೃಷಿ ವಲಯ'

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನನ್ನು 'ಶಾಶ್ವತ ವಿಶೇಷ ಕೃಷಿ ವಲಯ' ಎಂದು ಘೋಷಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೆಐಎಡಿಬಿ ಇಲ್ಲಿ ಭೂಸ್ವಾಧೀನಕ್ಕೆ ಮುಂದಾಗಿದ್ದಾಗ ರೈತರು ತೀವ್ರ ಪ್ರತಿಭಟನೆ ನಡೆಸಿದ್ದರು. ಈಗ ರೈತರ ಭೂಮಿಯನ್ನು ಹಸಿರು ವಲಯವಾಗಿಯೇ ಉಳಿಸಲು ಸರ್ಕಾರ ನಿರ್ಧರಿಸಿದೆ.

ಇತರ ನಿರ್ಧಾರಗಳು

ಕಲ್ಯಾಣ ಕರ್ನಾಟಕ ಭಾಗದ (ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ) 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ HPV ಲಸಿಕೆ ನೀಡಲು 15.34 ಕೋಟಿ ರೂ. ವೆಚ್ಚದಲ್ಲಿ ಲಸಿಕೆ ಖರೀದಿ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ. ವಿಜಯಪುರ ಜಿಲ್ಲೆಯ ತ್ರಿಕೋಟಾದಲ್ಲಿ 12.40 ಕೋಟಿ ರೂ. ವೆಚ್ಚದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ಸ್ಥಾಪನೆ. ಅಕ್ರಮ ಕಲ್ಲುಗಣಿ ಮತ್ತು ಒತ್ತುವರಿ ಪ್ರಕರಣಗಳಲ್ಲಿ 'ಒನ್ ಟೈಮ್ ಸೆಟಲ್ಮೆಂಟ್' (OTS) ಅಡಿಯಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ. ಒಂದೇ ಬಾರಿಗೆ ದಂಡ ಕಟ್ಟಿದರೆ ತೆರಿಗೆ ವಿನಾಯಿತಿ ಸಿಗಲಿದೆ.

Read More
Next Story