ನಿಗಮ-ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಿಸಿ ಸರ್ಕಾರ ಆದೇಶ
x

ನಿಗಮ-ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಇಲಾಖೆಗಳು ತಮ್ಮ ವ್ಯಾಪ್ತಿಯ ಆಡಳಿತ ಅಧಿನಿಯಮಗಳ ಪ್ರಕಾರ ಅಧ್ಯಕ್ಷರುಗಳಿಗೆ ಕಾರ್ಯನಿರ್ವಹಿಸಲು ಪೂರಕವಾದ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.


ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನ ಮಾಡಿದ್ದ ಅಧ್ಯಕ್ಷರ ಅಧಿಕಾರಾವಧಿ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಈಗಾಗಲೇ ಅವಧಿ ಮುಗಿದಿರುವ ಮತ್ತು ಅವಧಿ ಮುಗಿಯಲಿರುವ ಪ್ರಾಧಿಕಾರಗಳ ಅಧ್ಯಕ್ಷರು ತಮ್ಮ ಸ್ಥಾನದಲ್ಲಿ ಯಾವುದೇ ಅಡ್ಡಿ ಆತಂಕವಿಲ್ಲದೇ ಮುಂದುವರಿಯಬಹುದಾಗಿದೆ.

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿಯನ್ನು 'ಮುಂದಿನ ಆದೇಶದವರೆಗೆ' ಮುಂದುವರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಅಭಿಜಿನ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಲಾಖೆಗಳು ತಮ್ಮ ವ್ಯಾಪ್ತಿಯ ಆಡಳಿತ ಅಧಿನಿಯಮಗಳ ಪ್ರಕಾರ ಅಧ್ಯಕ್ಷರುಗಳಿಗೆ ಕಾರ್ಯನಿರ್ವಹಿಸಲು ಪೂರಕವಾದ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ವಿವಿಧ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ಮುಂದುವರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಫೆ.7ರ ಆದೇಶದಲ್ಲಿ ಕೆಲವರಿಗೆ ಸಚಿವ ಸ್ಥಾನಮಾನ ನೀಡಿ ಅವಧಿ ವಿಸ್ತರಿಸಲಾಗಿತ್ತು. ಆದರೆ, ಕಾಡಾ ಮತ್ತು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನು ಕೈಬಿಡಲಾಗಿತ್ತು. ಹೊಸ ನೇಮಕಾತಿ ನಡೆಯುವವರೆಗೆ ಅವರನ್ನೇ ಮುಂದುವರಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದರು.

Read More
Next Story