16 ವರ್ಷದೊಳಗಿನ ಮಕ್ಕಳಿಗೆ ಫೋನ್ ನಿಷೇಧ;  ಗೃಹ ಸಚಿವ ಪರಮೇಶ್ವರ್​ ಹೇಳಿದ್ದೇನು?
x

ಜಿ. ಪರಮೇಶ್ವರ್‌ 

16 ವರ್ಷದೊಳಗಿನ ಮಕ್ಕಳಿಗೆ ಫೋನ್ ನಿಷೇಧ; ಗೃಹ ಸಚಿವ ಪರಮೇಶ್ವರ್​ ಹೇಳಿದ್ದೇನು?

ಇಂದಿನ ಡಿಜಿಟಲ್ ಯುಗದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಒಂದು ಕ್ರಾಂತಿಕಾರಿ ನಿರ್ಧಾರಕ್ಕೆ ಮುಂದಾಗಿದೆ.


Click the Play button to hear this message in audio format

ಇಂದಿನ ಡಿಜಿಟಲ್ ಯುಗದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಒಂದು ಕ್ರಾಂತಿಕಾರಿ ನಿರ್ಧಾರಕ್ಕೆ ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಸ್ವರೂಪದ ಸಮಾಲೋಚನೆ ನಡೆಸುತ್ತಿದೆ.

ಈ ಬಗ್ಗೆ ಸೋಮವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೋಮವಾರ ಬೆಳಗ್ಗೆ ಕೆಲವು ಮಾಹಿತಿ ನೀಡಿ, ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಆರೋಗ್ಯ ಹಾಗೂ ಏಕಾಗ್ರತೆಯ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಹದಿಹರೆಯದ ಮಕ್ಕಳಿಗೆ ಮೊಬೈಲ್ ಅತಿಯಾದ ಆಕ್ಸೆಸ್ ನೀಡುವುದು ಅವರ ಓದು ಹಾಗೂ ಭವಿಷ್ಯದ ದೃಷ್ಟಿಯಿಂದ ಪೂರಕವಲ್ಲ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಯ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ಶೀಘ್ರದಲ್ಲೇ ಒಂದು ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕುಲಪತಿಗಳ ಜತೆ ಸಮಾಲೋಚನೆ

ಈ ವಿಷಯದ ಗಂಭೀರತೆಯನ್ನು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ಪ್ರಾಥಮಿಕ ಹಂತದ ಸಮಾಲೋಚನೆ ನಡೆಸಿದ್ದಾರೆ. ಶಾಲೆ-ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದರಿಂದ ಮಕ್ಕಳಲ್ಲಿ ಉಂಟಾಗುತ್ತಿರುವ ವರ್ತನೆ ಬದಲಾವಣೆ ಹಾಗೂ ಮಾದಕ ದ್ರವ್ಯಗಳಂತಹ ವ್ಯಸನಗಳತ್ತ ಆಕರ್ಷಿತರಾಗುವುದನ್ನು ತಡೆಯಬಹುದು ಎಂಬುದು ಸರ್ಕಾರದ ಆಶಯವಾಗಿದೆ. ಖಾಸಗಿ ಶಾಲೆಗಳಲ್ಲಿ ಈಗಾಗಲೇ ಕೆಲವು ಸ್ವರೂಪದ ನಿರ್ಬಂಧಗಳಿದ್ದರೂ, ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕರೂಪದ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇರಿಸಿದೆ.

ವಿಶೇಷವೆಂದರೆ, ಕೇವಲ ಕರ್ನಾಟಕ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಸ್ಟ್ರೇಲಿಯಾ, ಯುಕೆ ಮತ್ತು ಯುರೋಪ್‌ನ ಹಲವು ರಾಷ್ಟ್ರಗಳು ಈಗಾಗಲೇ ಶಾಲೆಗಳಲ್ಲಿ ಮೊಬೈಲ್ ನಿಷೇಧಿಸಿ ಯಶಸ್ವಿಯಾಗಿವೆ. ಈ ಜಾಗತಿಕ ಮಾದರಿಗಳನ್ನು ಅಧ್ಯಯನ ಮಾಡಲಾಗುತ್ತಿದ್ದು, ಗೂಗಲ್ ಹಾಗೂ ಮೆಟಾದಂತಹ ಪ್ರಮುಖ ತಂತ್ರಜ್ಞಾನ ಕಂಪನಿಗಳೊಂದಿಗೂ ಸರ್ಕಾರ ಮಾತುಕತೆ ನಡೆಸುತ್ತಿದೆ. ನೆರೆರಾಜ್ಯಗಳಾದ ಗೋವಾ ಮತ್ತು ಆಂಧ್ರಪ್ರದೇಶ ಕೂಡ ಇಂತಹದ್ದೇ ನಿಯಮದ ಬಗ್ಗೆ ಒಲವು ತೋರುತ್ತಿರುವುದು ರಾಜ್ಯದ ಈ ನಿರ್ಧಾರಕ್ಕೆ ಪುಷ್ಟಿ ನೀಡಿದಂತಿದೆ.

Read More
Next Story