ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ?: 4 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
x

ಕರ್ನಾಟಕದಲ್ಲಿ ನವೆಂಬರ್ 4, 5ರಂದು ಮಳೆ ಅಬ್ಬರಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ?: 4 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


Click the Play button to hear this message in audio format

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗುವ ಮುನ್ಸೂಚನೆ ಇದೆ. ಮುಂದಿನ ಎರಡು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ನಾಲ್ಕು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ನವೆಂಬರ್ 4 ಮತ್ತು 5ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ, ಉತ್ತರ ಒಳನಾಡಿನಲ್ಲೂ ಮಳೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನವೆಂಬರ್ 5ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಆದರೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಗುಡುಗು, ಬಿರುಗಾಳಿಗೆ ಎಚ್ಚರಿಕೆ

ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಹೊರಗೆ ಹೋಗುವ ಮುನ್ನ ಹವಾಮಾನದ ಮಾಹಿತಿ ಪರಿಶೀಲಿಸಿ. ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸುವ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ತೆರೆದ ಪ್ರದೇಶಗಳಲ್ಲಿ ನಿಲ್ಲದೆ ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚಿಸಲಾಗಿದೆ.

Read More
Next Story