ಕರ್ನಾಟಕದಲ್ಲಿ ಲೋಕಾಯುಕ್ತರ ಮೆಗಾ ದಾಳಿ | ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಹಲವು ಅಧಿಕಾರಿಗಳ ಮನೆ ಮೇಲೆ ಶೋಧ
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸೇರಿ ಹಲವು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಶೋಧ ನಡೆದಿದೆ.
ಕರ್ನಾಟಕದಲ್ಲಿ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕ ಕಮ್ ಕಂಡಕ್ಟರ್ ಷಡಕ್ಷರಯ್ಯ, ಚಿತ್ರದುರ್ಗದಲ್ಲಿ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ಇನ್ಸ್‌ಪೆಕ್ಟರ್ ವೆಂಕಟೇಶ್ ನಿವಾಸಗಳ ಮೇಲೆ ಶೋಧ ನಡೆದಿದೆ. ಬಾಗಲಕೋಟೆಯ ಜಮಖಂಡಿಯಲ್ಲಿ ಸಂಜು ಹಿಪ್ಪರಗಿ ಮತ್ತು ಹಾಸನದಲ್ಲಿ ಅರಣ್ಯಾಧಿಕಾರಿ ಹೇಮಂತ್‌ಕುಮಾರ್ ಅವರಿಗೆ ಸೇರಿದ ಸ್ಥಳಗಳಲ್ಲೂ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ಮನೆ, ಕಚೇರಿ ಮಾತ್ರವಲ್ಲದೆ ಸಂಬಂಧಿಕರು ಹಾಗೂ ಆಪ್ತ ಗುತ್ತಿಗೆದಾರರ ನಿವಾಸಗಳ ಮೇಲೂ ದಾಳಿ ನಡೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಈ ಮೆಗಾ ಕಾರ್ಯಾಚರಣೆ ವೇಳೆ ಅಕ್ರಮ ಆಸ್ತಿ ಹಾಗೂ ಮಹತ್ವದ ದಾಖಲೆಗಳು ಪತ್ತೆಯಾಗಿವೆಯೇ ಎಂಬ ಕುತೂಹಲ ಮೂಡಿದೆ. ಲೋಕಾಯುಕ್ತರ ಪರಿಶೀಲನೆ ಮುಂದುವರಿದಿದೆ.
Next Story
