x

ಮತ್ತೆ ಬೀದಿಗಿಳಿದ KSRTC BMTC ನೌಕರರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ವೇತನ ಪರಿಷ್ಕರಣೆ ,ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.


ವೇತನ ಪರಿಷ್ಕರಣೆ ಹಾಗು ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಃಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಸಾರಿಗೆ ನೌಕರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾವು ಭಿಕ್ಷೆ ಬೇಡುತ್ತಿಲ್ಲ ನಮ್ಮ ಹಕ್ಕುಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿಗೆ ನೌಕರರು ಹೇಳಿದರು. ಪಂಚಗ್ಯಾರಂಟಿಗಳನ್ನು ಯಾರೂ ಕೇಳಿರಲಿಲ್ಲ ಇವರು ಕೊಟ್ಟು ಈಗ ಹಣವಿಲ್ಲ ಎಂದು ಹೇಳುತ್ತಿದ್ದಾರೆ ಕರೋನಾ ಸಮಯದಲ್ಲಿ ನಾವು ಕಷ್ಟ ಪಟ್ಟು ದುಡಿದಿದ್ದೇವೆ ಎಂದು ಹೇಳಿದರು.

01-01-2024 ರಿಂದ 31-12-2027 ರವರೆಗೆ 4 ವರ್ಷಗಳ ಅವಧಿಗೆ ಅನ್ವಯವಾಗುವಂತೆ ರಾಜ್ಯ ಸರ್ಕಾರ ತನ್ನ ಎರಡೂ ಆದೇಶವನ್ನು ತಿದ್ದುಪಡಿ ತರಬೇಕೆಂದು ಆಗ್ರಹಿಸಿದರು.ಶೇಕಡಾ 15 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ವೇತನ ಹೆಚ್ಚಳ ಮಾಡಬೇಕು ,ಬಾಕಿಯಿರುವ ಹಿಂಬಾಕಿ ವೇತನವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು ಎಂದು ಹೇಳಿದರು.ಸರ್ಕಾರ ನಮ್ಮ‌ ಬೇಡಿಕೆ ಈಡೇರಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಜ್ಯೋತಿ ಅನಂತ ಸುಬ್ಬರಾವ್ ಮಾತನಾಡಿಸಾರಿಗೆ ನೌಕರರ ವೇತನ ಪರಿಷ್ಕರಣೆಗಾಗಿ ಕಳೆದ ಎರಡು ವರ್ಷಗಳಿಂದ ಶಾಂತಿಯುತವಾಗಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು. ಆದರೆ ಬೇಡಿಕೆಗಳನ್ನು ಸರ್ಕಾರವಾಗಲಿ, ಆಡಳಿತ ವರ್ಗವಾಗಲಿ ಇತ್ಯರ್ಥಪಡಿಸಿಲ್ಲ ಎಂದು ಅಸಮಧಾನಹೊರಹಾಕಿದರು. ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ಏಕ ಪಕ್ಷೀಯವಾಗಿ ತಿರ್ಮಾನ ತೆಗೆದುಕೊಂಡಿದೆ ಎಂದು ಹೇಳಿದರು. ಸಾರಿಗೆ ಸಚಿವ ಭೈರತಿ ಸುರೇಶ್ ಭೇಟಿಗೆ ಅವಕಾಶ ಕೇಳಿದರೂ ಕೊಡುತ್ತಿಲ್ಲ ಸಚಿವರು ನಮ್ಮ ಭೇಟಿ ಮಾಡುತ್ತಿಲ್ಲ ಎಂದು ಅಸಮಧಾನ ಹೊರಹಾಕಿದರು.

ಸಾರಿಗೆ ನೌಕರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಹಕ್ಕುಗಳನ್ನು ಕೇಳುತ್ತಿದ್ದಾರೆ ಅವರ ತಾಳ್ಮೆಯನ್ನು ಪರೀಕ್ಷೆಮಾಡಬೇಡಿ ಮುಂದಿನ ಬೆಳವಣಿಗೆಗಳಿಗೆ ಸರ್ಕಾರ ಜವಾಬ್ದಾರಿ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

Read More
Next Story