ಕರಾವಳಿ, ಮಲೆನಾಡಿನಲ್ಲಿ ವರುಣನ ಆರ್ಭಟ
ರಾಜ್ಯದ ಪಶ್ಚಿಮ ಘಟ್ಟ ಸಾಲುಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಆರ್ಭಟ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಪಶ್ಚಿಮ ಘಟ್ಟ ಸಾಲುಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಆರ್ಭಟ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜುಲೈ 10 ರಂದು ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಎಂಟು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬೆಳಗಾವಿಯಲ್ಲಿ ಗರಿಷ್ಠ 115.4 ಮಿ. ಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ತೀರ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 40 ಕಿ.ಮೀಟರ್‌ನಿಂದ 50 ಕಿ.ಮೀಟರ್ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
Next Story

