Weather Report : ರಾಜ್ಯದಲ್ಲಿ ಇಂದು ಹಲವೆಡೆ ಮಳೆ, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
x

ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. 

Weather Report : ರಾಜ್ಯದಲ್ಲಿ ಇಂದು ಹಲವೆಡೆ ಮಳೆ, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಳೆಯಿಂದಾಗಿ ಕೊಂಚ ಕಡಿಮೆಯಾಗಿದ್ದ ದೂಳಿನ ಪ್ರಮಾಣ ವಾತಾವರಣದಲ್ಲಿ ಮತ್ತೆ ಏರಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.


Click the Play button to hear this message in audio format

ಬೆಂಗಳೂರು ಹಾಗೂ ರಾಜ್ಯದಾದ್ಯಂತ ಹವಾಮಾನದಲ್ಲಿ ಗಣನೀಯ ಬದಲಾವಣೆಯಾಗುತ್ತಿದ್ದು, ರಾಜಧಾನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ.

ಮಳೆಯಿಂದಾಗಿ ಕೊಂಚ ಕಡಿಮೆಯಾಗಿದ್ದ ದೂಳಿನ ಪ್ರಮಾಣ ವಾತಾವರಣದಲ್ಲಿ ಮತ್ತೆ ಏರಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಹದಿನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ನೀಡಿದೆ.

ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಭಾಗಗಳಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ ಮತ್ತು ರಾಜ್ಯದ ಉಳಿದೆಡೆ ಒಣ ಹವೆ ಮುಂದುವರಿಯಲಿದೆ.

ಏಪ್ರಿಲ್ 10ರ ಬಳಿಕ ಭಾರಿ ಮಳೆ

ರಾಜ್ಯಾದ್ಯಂತ ಬಿಸಿ ಮತ್ತು ಆರ್ದ್ರ ವಾತಾವರಣವಿದ್ದರೂ, ಇತ್ತೀಚಿನ ಮಳೆಯ ಕಾರಣದಿಂದಾಗಿ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಆದರೆ ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ದೀರ್ಘಾವಧಿಯ ಸರಾಸರಿಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿ ದಾಖಲಾಗಿದೆ. ಇನ್ನು ಏಪ್ರಿಲ್ ಹತ್ತರ ಬಳಿಕ ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತಷ್ಟು ಬಿರುಸುಗೊಳ್ಳಲಿದ್ದು, ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ ನಿನೋ ಕರಿನೆರಳು

ಈ ಬಾರಿಯ ಮಳೆಗಾಲದ ಮೇಲೆ ಹವಾಮಾನ ವೈಪರೀತ್ಯಗಳ ಕರಿನೆರಳು ಬೀಳುವ ಸಾಧ್ಯತೆಯಿದೆ. ಜೂನ್ ತಿಂಗಳ ಬಳಿಕ ಶೇಕಡಾ 50ಕ್ಕೂ ಹೆಚ್ಚು 'ಎಲ್ ನಿನೋ' ಪ್ರಭಾವ ಆರಂಭವಾಗುವ ಮುನ್ಸೂಚನೆಗಳಿದ್ದು, ಇದು ಈ ವರ್ಷದ ಮಳೆಗಾಲದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹವಾಮಾನ ಮುನ್ಸೂಚನಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

Read More
Next Story