KPSC Result | Candidates from the same center pass in a row?
x

ಕೆಪಿಎಸ್‌ಸಿ ಪ್ರಕಟಿಸಿರುವ ಪಟ್ಟಿಯಲ್ಲಿರುವ ಒಂದೇ ಸಾಲಿನ ನೋಂದಣಿ ಸಂಖ್ಯೆ 

ಕೆಪಿಎಸ್ಸಿ ಪರೀಕ್ಷೆ ಅಕ್ರಮ ಆರೋಪ; ವ್ಯಕ್ತಿತ್ವ ಪರೀಕ್ಷೆ ಹಿಂಪಡೆದ ಆಯೋಗ

ವ್ಯಕ್ತಿತ್ವ ಪರೀಕ್ಷೆಯ ಪರಿಷ್ಕೃತ ದಿನಾಂಕ ಹಾಗೂ ಸಮಯಗಳ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಜ್ಯೋತಿ.ಕೆ. ಅವರು ತಿಳಿಸಿದ್ದಾರೆ.


2023 24 ನೇ ಸಾಲಿನ 384 ಎ ಮತ್ತು ಬಿ ದರ್ಜೆಯ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಅಕ್ರಮಗಳು ನಡೆದಿರುವ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿತ್ವ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಹಿಂಪಡೆದಿದೆ.

ಮಾರ್ಚ್ 23 ರಿಂದ ಮೇ 4ರವರೆಗೆ ವ್ಯಕ್ತಿತ್ವ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆ ಕೈಗೆತ್ತಿಕೊಳ್ಳಲು ನಿರ್ಧರಿಸಿತ್ತು. ಇದೀಗ ದಿಢೀರನೇ ಆಡಳಿತಾತ್ಮಕ ಕಾರಣ ನೀಡಿ ವ್ಯಕ್ತಿತ್ವ ಪರೀಕ್ಷೆ ಹಿಂಪಡೆದಿರುವ ಆಯೋಗದ ಕ್ರಮ‌ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ಕೇಳಿಬಂದ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೆಪಿಎಸ್ ಸಿ ಕಾರ್ಯದರ್ಶಿ ಅವರನ್ನು ವರದಿ ಕೇಳಿದ ಬೆನ್ನಲ್ಲೇ ಕೆಪಿಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಆಂತರಿಕ ತನಿಖೆ ಆರಂಭಿಸಿ, ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳ ಮರುಪರಿಶೀಲನೆ ನಡೆಸಿತ್ತು. ಈ ವೇಳೆ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಮಾ.10 ರಂದು ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದ ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿಯನ್ನು ಆಡಳಿತಾತ್ಮಕ ಕಾರಣಗಳಿಂದ ಹಿಂಪಡೆಯಲಾಗಿದೆ. ವ್ಯಕ್ತಿತ್ವ ಪರೀಕ್ಷೆಯ ಪರಿಷ್ಕೃತ ದಿನಾಂಕ ಹಾಗೂ ಸಮಯಗಳ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಜ್ಯೋತಿ.ಕೆ. ಅವರು ತಿಳಿಸಿದ್ದಾರೆ.

ಎ ಮತ್ತು ಬಿ ದರ್ಜೆಯ 384 ಹುದ್ದೆಗಳಿಗೆ ನಡೆದಿದ್ದ ಪರೀಕ್ಷೆ ವೇಳೆ ಒಂದೇ ಕೊಠಡಿಯಲ್ಲಿದ್ದ 11 ಅಭ್ಯರ್ಥಿಗಳು ಆಯ್ಕೆಯಾಗಿರುವುದು, ಸಂಬಂಧಿಕರೇ ಆಯ್ಕೆಯಾಗಿರುವುದು ಅಕ್ರಮದ ಅನುಮಾನಕ್ಕೆ ಕಾರಣವಾಗಿತ್ತು.

ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ನಡೆದಿದ್ದ ಮುಖ್ಯ ಪರೀಕ್ಷೆಯ ಕೊಠಡಿಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿತ್ತು.

Read More
Next Story