ಚಿತ್ರದುರ್ಗ|  ಚಿರತೆ ದಾಳಿಗೆ ರೈತ ಬಲಿ
x

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಬಳಿ ಮಧ್ಯರಾತ್ರಿ ಚಿರತೆ ದಾಳಿಗೆ 65 ವರ್ಷದ ರೈತ ರಾಮಚಂದ್ರಪ್ಪ ಮೃತಪಟ್ಟಿದ್ದಾರೆ.

ಚಿತ್ರದುರ್ಗ| ಚಿರತೆ ದಾಳಿಗೆ ರೈತ ಬಲಿ

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಬಳಿ ಮಧ್ಯರಾತ್ರಿ ಚಿರತೆ ದಾಳಿಗೆ 65 ವರ್ಷದ ರೈತ ರಾಮಚಂದ್ರಪ್ಪ ಮೃತಪಟ್ಟಿದ್ದಾರೆ. ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Click the Play button to hear this message in audio format

ಚಿರತೆ ದಾಳಿಗೆ ಸಿಲುಕಿ 65 ವರ್ಷದ ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಗ್ರಾಮದ ಸಮೀಪ ನಡೆದಿದೆ. ಬುಧವಾರ ಮಧ್ಯರಾತ್ರಿ ಮನೆಯ ಬಳಿಯೇ ನಡೆದ ಈ ಘಟನೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಮೃತರನ್ನು ದೊಡ್ಡಚಲ್ಲೂರು ಗ್ರಾಮದ ರಾಮಚಂದ್ರಪ್ಪ (65) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ತಮ್ಮ ಮನೆಯ ಸಮೀಪ ಇದ್ದಾಗ ಚಿರತೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ರಾಮಚಂದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 4ರ ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ಸಂಭವಿಸಿದೆ. ಜನವಸತಿ ಪ್ರದೇಶದ ಸಮೀಪವೇ ಚಿರತೆ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ರೈತನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಚಿರತೆ ಸೆರೆಹಿಡಿಯಲು ಗ್ರಾಮಸ್ಥರ ಆಗ್ರಹ

ಘಟನೆಯ ಬಳಿಕ ದೊಡ್ಡಚಲ್ಲೂರು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಸಂಚಾರದ ಆತಂಕ ಎದುರಾಗಿದ್ದು, ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಪತ್ತೆಹಚ್ಚಿ ಸೆರೆಹಿಡಿಯಬೇಕು. ಜೊತೆಗೆ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More
Next Story