LPG Cylinder| ರಾಜ್ಯದಲ್ಲಿ ಹೊಟೇಲ್‌ಗಳು ಬಂದ್‌ ಆಗುತ್ತಾ? ಮಾಲೀಕರ ಸಂಘದ ಅಧ್ಯಕ್ಷ ಹೇಳಿದ್ದೇನು?
x

LPG Cylinder| ರಾಜ್ಯದಲ್ಲಿ ಹೊಟೇಲ್‌ಗಳು ಬಂದ್‌ ಆಗುತ್ತಾ? ಮಾಲೀಕರ ಸಂಘದ ಅಧ್ಯಕ್ಷ ಹೇಳಿದ್ದೇನು?

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮ ಎದುರಿಸುತ್ತಿರುವ ಆತಂಕದ ಬಗ್ಗೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಸ್ಪಷ್ಟನೆ ನೀಡಿದ್ದಾರೆ.


ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮಕ್ಕೆ ಎದುರಾಗಿರುವ ಆತಂಕದ ಬಗ್ಗೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು ಸ್ಪಷ್ಟನೆ ನೀಡಿದ್ದಾರೆ. ಗ್ಯಾಸ್ ಕೊರತೆಯಿದ್ದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೋಟೆಲ್‌ಗಳನ್ನು ಎಂದಿನಂತೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೋಟೆಲ್ ಬಂದ್ ಇಲ್ಲ

ದ ಫೆಡರಲ್ ಕರ್ನಾಟಕದ ಜೊತೆಗೆ ಮಾತನಾಡಿದ ಅವರು, ಈ ಸಮಸ್ಯೆಯ ಗಂಭೀರತೆ ಮತ್ತು ಪರಿಹಾರಕ್ಕಾಗಿ ಸರ್ಕಾರಕ್ಕೆ ಮಾಡಿರುವ ಮನವಿಯ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೊಂದರೆ ಉಂಟಾಗಿದ್ದರೂ, ಹೋಟೆಲ್‌ಗಳನ್ನು ಬಂದ್ ಮಾಡುವ ಯಾವುದೇ ಆಲೋಚನೆ ಸಂಘದ ಮುಂದಿಲ್ಲ. "ನಮಗೆ ಗ್ರಾಹಕರಿಗೆ ತೊಂದರೆ ಕೊಡಲು ಇಷ್ಟವಿಲ್ಲ, ಹಾಗಾಗಿ ಎಲ್‌ಪಿಜಿ ಪೂರೈಕೆಯಾಗುವವರೆಗೂ ನಾವು ಹೋಟೆಲ್ ನಡೆಸುತ್ತೇವೆ" ಎಂದು ಪಿ.ಸಿ. ರಾವ್ ಹೇಳಿದ್ದಾರೆ.

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ

ಪ್ರಸ್ತುತ ಮಾರುಕಟ್ಟೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ. ಇದು ಹೋಟೆಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಗ್ಯಾಸ್ ಕೊರತೆಗೆ ಪರ್ಯಾಯವಾಗಿ ಸೌದೆಯನ್ನು ಬಳಸುವ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, "ಇಂದಿನ ಕಾಲದಲ್ಲಿ ಸೌದೆಯನ್ನು ಬಳಸಿ ಹೋಟೆಲ್ ನಡೆಸುವುದು ಅಸಾಧ್ಯದ ಮಾತು" ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸಚಿವರಿಗೆ ಮನವಿ

ಈ ಗಂಭೀರ ಸಮಸ್ಯೆಯನ್ನು ಬಗೆಹರಿಸುವಂತೆ ಕೇಂದ್ರದ ಸಂಸದರಿಗೆ ಮತ್ತು ಸಂಬಂಧಪಟ್ಟ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಎಲ್‌ಪಿಜಿ ಪೂರೈಕೆಯಲ್ಲಿ ಇನ್ನು ಮುಂದೆ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಕೋರಲಾಗಿದೆ. ಹೋಟೆಲ್ ಸಂಘದ ಮನವಿಗೆ ಸ್ಪಂದಿಸಿರುವ ಜನಪ್ರತಿನಿಧಿಗಳು ಮತ್ತು ಸಚಿವರು, ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯವನ್ನು ಶೀಘ್ರವೇ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಪಿ.ಸಿ. ರಾವ್ ತಿಳಿಸಿದ್ದಾರೆ.

Read More
Next Story